
ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬವೊಂದಕ್ಕೆ ರಸ್ತೆ ಅಪಘಾತ ರೂಪದಲ್ಲಿ ಬರಸಿಡಿಲು ಬಡಿದಿದೆ. ಸಂಬಂಧಿಕರ ಮನೆಗೆ ಹಬ್ಬ ಆಚರಿಸಲು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ 18 ವರ್ಷದ ಯುವತಿ ಮೃತಪಟ್ಟಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬೈರಾಪುರ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಮೃತ ಯುವತಿಯನ್ನು ದ್ರಾಕ್ಷಾಯಿಣಿ (18) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ತಂದೆ ರಮೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ತರೀಕೆರೆ ತಾಲೂಕಿನ ಲಿಂಗದಹಳ್ಳಿ ಶಾಂತಿನಗರ ನಿವಾಸಿಗಳಾದ ರಮೇಶ್ ಹಾಗೂ ಪುತ್ರಿ ದ್ರಾಕ್ಷಾಯಿಣಿ ಬೈಕ್ನಲ್ಲಿ ಎಂ.ಸಿ. ಹಳ್ಳಿಗೆ ಸಂಬಂಧಿಕರ ಮನೆಗೆ ದೀಪಾವಳಿ ಹಬ್ಬದ ಆಚರಣೆಗೆ ತೆರಳುತ್ತಿದ್ದರು. ಈ ವೇಳೆ ಬೈರಾಪುರ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.

ಘಟನೆ ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.













