
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಬೆಳ್ತಂಗಡಿ ತಾಲೂಕು ಪಂಚಾಯತ್ನ ಕಾರ್ಯನಿರ್ವಾಹಣಾಧಿಕಾರಿಯಾಗಿ ದಯಾವತಿ ಎಂ. ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಬೆಳ್ತಂಗಡಿ ತಾಲೂಕು ಪಂಚಾಯತ್ನ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭವಾನಿಶಂಕರ್ ಎನ್. ಅವರನ್ನು ಮೂಡುಬಿದಿರೆ ತಾಲೂಕು ಪಂಚಾಯತ್ಗೆ ವರ್ಗಾವಣೆ ಮಾಡಲಾಗಿದೆ.

ತೆರವಾದ ಹುದ್ದೆಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಪಂಚಾಯತ್ನಲ್ಲಿ ಕಾರ್ಯನಿರ್ವಾಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ದಯಾವತಿ ಎಂ. ಅವರನ್ನು ನೇಮಕ ಮಾಡಲಾಗಿದೆ. (ವರದಿ- ತನು ಕೊಟ್ಟಿಗೆಹಾರ)












