ರಿಪ್ಪನ್ಪೇಟೆ: (ನ್ಯೂಸ್ ಮಲ್ನಾಡ್ ವರದಿ) ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನಡುವಿನ ತಿರುವಿನಲ್ಲಿ ಶನಿವಾರ ಸಂಜೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ

ಆಯನೂರು ಸಮೀಪದ ಹೊಸೂರು ನಿವಾಸಿ ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಸುಬ್ರಹ್ಮಣ್ಯ ಜಿ.ಎಸ್ (65) ಮೃತರು.
ತೀರ್ಥಹಳ್ಳಿ ತಾಲ್ಲೂಕಿನ ಅಂಬು ತೀರ್ಥ ಗ್ರಾಮದ ಸಂಬಂಧಿಕರ ಮನೆಯಲ್ಲಿ ವೈಕುಂಠ ಸಮಾರಾಧನೆ ಕಾರ್ಯಕ್ರಮ ಮುಗಿಸಿಕೊಂಡು ಮರಳಿ ಊರಿಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ ಜಾಬ್, ಅರ್ಜಿ ಆಹ್ವಾನ
ಈ ಕುರಿತು ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.












