ಎನ್.‌ ಆರ್.‌ ಪುರ: ಜಿಂಕೆ ಬೇಟೆ | ಪ್ರಕರಣ ದಾಖಲು

ಎನ್.‌ ಆರ್.‌ ಪುರ: (ನ್ಯೂಸ್ ಮಲ್ನಾಡ್ ವರದಿ) ಜಿಂಕೆಯನ್ನು ಭೇಟೆಯಾಡಿ ಕಾರಿನಲ್ಲಿ ಸಾಗಿಸುತ್ತಿದ್ದವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಜಿಂಕೆ ಕಳೇಬರ ಹಾಗೂ ಕಾರನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.


ಇದನ್ನೂ ಓದಿ: 4-6ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ, ಏನದು?


ಬಾಳೆಹೊನ್ನೂರು ಭಾಗದಿಂದ ನರಸಿಂಹರಾಜಪುರದ ಕಡೆಗೆ ಬರುತ್ತಿದ್ದಾಗ ಚಿಕ್ಕ ಅಗ್ರಹಾರದ ಸಮೀಪ ಅರಣ್ಯ ಇಲಾಖೆ ಸಿಬ್ಬಂದಿ ಕಾರನ್ನು ತಡೆದಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳ ಶೋಧ ಕಾರ್ಯ ಮುಂದುವರಿದಿದೆ. ಗುಬ್ಬಿಗಾ ಗ್ರಾಮದ ಜಿ.ಎನ್. ಭರತ್ ಹಾಗೂ ಇತರರ ಮೇಲೆ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್‌ ನ್ಯೂಸ್ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಕಾರ್ಯಾಚರಣೆಯಲ್ಲಿ ಚಿಕ್ಕಅಗ್ರಹಾರ ಉಪ ವಲಯ ಅರಣ್ಯಾಧಿಕಾರಿ ಎಚ್.ಬಿ.ನಂದೀಶ, ಕುದುರೆಗುಂಡಿ ಉಪ ವಲಯ ಅರಣ್ಯಾಧಿಕಾರಿ ರಂಗನಾಥ ಅತಾಲಟ್ಟಿ, ಗಸ್ತು ಅರಣ್ಯ ಪಾಲಕರಾದ ರಂಗಸ್ವಾಮಿ, ಸಿದ್ದೇಶ್, ಪ್ರತಾಪ್, ಅರಣ್ಯ ವೀಕ್ಷಕರಾದ ರವಿ, ಗಣೇಶ್, ವಾಹನ ಚಾಲಕ ಜಗದೀಶ್ ಇದ್ದರು.


ಇದನ್ನೂ ಓದಿ: 10-12 ನೇ ತರಗತಿ ಪಾಸಾದವರಿಗೆ ಹೈಕೋರ್ಟ್‌ನಲ್ಲಿ ಜಾಬ್


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.