ಎನ್.‌ ಆರ್.‌ ಪುರ: ಜಿಂಕೆ ಬೇಟೆ: ಮೂವರು ಆರೋಪಿಗಳ ಬಂಧನ

ಎನ್.‌ ಆರ್.‌ ಪುರ: (ನ್ಯೂಸ್ ಮಲ್ನಾಡ್ ವರದಿ) ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು ಮಾಂಸವನ್ನು ಸ್ವಚ್ಛ ಮಾಡುತ್ತಿದ್ದಾಗ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ದಾಳಿ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸೈಯ್ಯದ್ ಮನ್ಸೂರ್, ಅಜತ್, ಗಿರೀಶ್ ಬಂಧಿತ ಆರೋಪಿಗಳು.


ಇದನ್ನೂ ಓದಿ: ಹುಟ್ಟೂರು ಶೃಂಗೇರಿಯನ್ನ ಕೊಂಡಾಡಿದ ವಜ್ರಕಾಯ ಬೆಡಗಿ; ನಾನು ಶೃಂಗೇರಿಯವಳು ಎನ್ನಲು ಈ ಕಾರಣಕ್ಕೆ ಹೆಮ್ಮೆ ನಭಾ ನಟೇಶ್..


ಖಚಿತ ಮಾಹಿತಿ ಆಧರಿಸಿ ನರಸಿಂಹರಾಜಪುರ ವಲಯ ಅರಣ್ಯಾಧಿಕಾರಿ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ, ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿಯ ಕುಸುಬೂರು ಗ್ರಾಮದ ದೊಡ್ಡಿನತಲೆ ಮೇಲ್ಬಾಗದ ಆರಂಬಳ್ಳಿ ಅರಣ್ಯದಲ್ಲಿ ದಾಳಿ ಮಾಡಿದ್ದಾರೆ. ಐವರು ಆರೋಪಿಗಳು ಜಿಂಕೆ ಮಾಂಸವನ್ನು ಸ್ವಚ್ಛ ಮಾಡುತ್ತಿದ್ದು, ಅವರನ್ನು ಹಿಡಿಯಲು ಹೋದಾಗ ಇಬ್ಬರು ಆರೋಪಿಗಳಾದ ಮಹಮ್ಮದ್ ಆರೀಫ್, ಸೈಯ್ಯದ್ ಓಡಿ ಹೋಗಿ ತಲೆ ಮರೆಸಿಕೊಂಡಿದ್ದು, ಸೈಯ್ಯದ್ ಮನ್ಸೂರ್, ಅಜತ್, ಗಿರೀಶ್ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳು ಮುತ್ತಿನಕೊಪ್ಪ ಭಾಗದವರಾಗಿದ್ದು, ಜಿಂಕೆ ಕೊಲ್ಲಲು ಬಳಸಿದ್ದ ನಾಡ ಬಂದೂಕು ಹಾಗೂ ಜಿಂಕೆ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.


ಇದನ್ನೂ ಓದಿ: ವರ್ಷದ ಕೊನೆಯ ಖಗ್ರಾಸ ಚಂದ್ರಗ್ರಹಣ; ಶುರು-ಅಂತ್ಯ ಯಾವಾಗ?


ಕೊಪ್ಪ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್, ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಾಬು ರಾಜೇಂದ್ರ ಪ್ರಸಾದ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನರಸಿಂಹರಾಜಪುರ ವಲಯ ಅರಣ್ಯಾಧಿಕಾರಿ ಪ್ರವೀಣ್‌ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ಅರುಣ ಬಾರಂಗಿ, ಗಸ್ತು ಅರಣ್ಯ ಪಾಲಕರಾದ ನವೀನ್ ಕುಮಾರ್, ಬಲರಾಮೇಗೌಡ, ರಾಘವೇಂದ್ರ ಹಾಗೂ ವಾಹನ ಚಾಲಕ ಸುದೀಪ್ ಭಾಗವಹಿಸಿದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.