ಚಿಕ್ಕಮಗಳೂರು: ಜಿಂಕೆ ಬೇಟೆ, ಮೂವರು ಬಂಧನ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ತಾಲ್ಲೂಕಿನ ಮಲಗಾರು ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಮೂವರನ್ನು ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ನಿವಾಸಿಗಳಾದ ವೆಂಕಟರಮಣ, ಕನ್ನಿಯಪ್ಪನ್ ಹಾಗೂ ಸುರೇಶ್ ಬಂಧಿತರು. ಇವರು ಕೂಲಿ ಕೆಲಸಕ್ಕಾಗಿ ಚಿಕ್ಕಮಗಳೂರಿಗೆ ಬಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಅತ್ತಿಗುಂಡಿಯಿಂದ ಮಲಗಾರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕಚ್ಚಾ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಅರಣ್ಯ ಸಂಚಾರ ದಳದ ಸಿಬ್ಬಂದಿ ಅನುಮಾನಾಸ್ಪದವಾಗಿ ಕಂಡು ಇವರನ್ನು ತಡೆದು ಪರಿಶೀಲನೆ ನಡೆಸಿದರು.

ಪರಿಶೀಲನೆಯ ವೇಳೆ ಜಿಂಕೆ ಜಾತಿಗೆ ಸೇರಿದ ಪ್ರಾಣಿಯ ಕಳೆಬರ, ಮರದ ದೊಣ್ಣೆಗಳು ಹಾಗೂ ಟಾರ್ಚ್‌ಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.