ಕೊಪ್ಪ: ಸೇತುವೆ ಕಾಮಗಾರಿ ವಿಳಂಬ, ರಸ್ತೆ ತಡೆದು ಪ್ರತಿಭಟನೆ

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ತಾಲ್ಲೂಕಿನ ಅತ್ತಿಕೋಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಣಸಿನಹಾಡ್ಯ–ಹೊರಿಕೊಂಡ ಸಂಪರ್ಕ ರಸ್ತೆಯ ಸೇತುವೆ ಕಾಮಗಾರಿ ವಿಳಂಬ ಖಂಡಿಸಿ, ದಿವಂಗತ ಶೇಷೇಗೌಡರ ಕುಟುಂಬಸ್ಥರು ಇಂದು ಹೋರನಾಡು–ಮೇಣಸಿನಹಾಡ್ಯ–ಶೃಂಗೇರಿ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ನಕ್ಸಲ್ ಶರಣಾಗತಿ ಪ್ಯಾಕೇಜ್ ಅಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ₹50 ಲಕ್ಷ ಅನುದಾನ ಮಂಜೂರಾಗಿದ್ದು, ಕಳೆದ ಏಪ್ರಿಲ್‌ನಲ್ಲಿ ಕಾಮಗಾರಿ ಆರಂಭಿಸಲಾಗಿತ್ತು. ಆದರೆ, ಗುತ್ತಿಗೆದಾರರು ಕೇವಲ ಪಿಲ್ಲರ್‌ಗಳನ್ನು ನಿರ್ಮಿಸಿ ಕಾಮಗಾರಿಯನ್ನು ಅರ್ಧದಲ್ಲೇ ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ಮಳೆಗಾಲದಲ್ಲಿ ಹೊರಿಕೊಂಡ ಭಾಗದ ಹಲವು ಕುಟುಂಬಗಳ ಸಂಚಾರ ಸಂಪರ್ಕ ಸಂಪೂರ್ಣ ಕಡಿತಗೊಳ್ಳುವ ಆತಂಕ ಎದುರಾಗಿದೆ.

ಇದೇ ಕುಟುಂಬಕ್ಕೆ ಸೇರಿದ ಐತಿಹಾಸಿಕ ಅಷ್ಟರೂಢ ಪಾರ್ವತಿ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಯೂ ಪ್ರಗತಿಯಲ್ಲಿದೆ. ಆದರೆ, ಸೇತುವೆ ನಿರ್ಮಾಣ ಪೂರ್ಣಗೊಳ್ಳದ ಕಾರಣ ದೇವಸ್ಥಾನದ ಕಾಮಗಾರಿಗೆ ಅಗತ್ಯವಿರುವ ಕಟ್ಟಡ ಸಾಮಗ್ರಿಗಳನ್ನು ಸಾಗಿಸಲು ತೀವ್ರ ತೊಂದರೆಯಾಗುತ್ತಿದೆ.

ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಕೊಪ್ಪ ತಹಶೀಲ್ದಾರ್ ಕೂಡಲೇ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕು ಮತ್ತು ಬಾಕಿ ಉಳಿದಿರುವ ಸೇತುವೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.