ಶೃಂಗೇರಿ: ಅತಿವೃಷ್ಟಿ ಪ್ರದೇಶವೆಂದು ಘೋಷಣೆಗೆ ಆಗ್ರಹ | ಧರಣಿ ಸತ್ಯಾಗ್ರಹಕ್ಕೆ ಕರೆ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಈ ಭಾರೀ ವಾಡಿಕೆಗಿಂತ ಹೆಚ್ಚು ಮಳೆಯಾದ ಕಾರಣ ರೈತರು ಬೆಳೆದ ಬೆಳೆಗಳು ನಾಶವಾಗಿದೆ. ಹೀಗಾಗಿ ತಾಲೂಕನ್ನು ಅತಿವೃಷ್ಟಿ ಪ್ರದೇಶವೆಂದು ಘೋಷಣೆ ಮಾಡಿ ಸೂಕ್ತ ಪರಿಹಾರ ನೀಡುವಂತೆ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.


ಇದನ್ನೂ  ಓದಿ; ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 1170 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ಈ ಭಾರಿಯ ಮಳೆಗೆ ಅಡಿಕೆ, ಕಾಳುಮೆಣಸು, ಕಾಫಿ, ಏಲಕ್ಕಿ, ಭತ್ತ ಇನ್ನು ಮುಂತಾದ ಬೆಳೆಗಳು ಹಾನಿಯಾಗಿದೆ. ಈ ಬಗ್ಗೆ ಸಂಬಂಧಪಟ್ಟ ಕಂದಾಯ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಕಾಫಿ ಮಂಡಳಿ ಮತ್ತು ಸಾಂಬಾರು ಮಂಡಳಿಯ ಎಲ್ಲಾ ಅಧಿಕಾರಿಗಳು ರೈತರ ಜಮೀನುಗಳನ್ನು ಸರ್ವೇ ಮಾಡಿ ಸೂಕ್ತ ಪರಿಹಾರವನ್ನು ನೀಡುವಂತೆ ಈ ಹಿಂದೆ ಮನವಿ ಸಲ್ಲಿಸಲಾಗಿತ್ತು. ಆದರೆ, ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಈಗಾಗಲೇ ರೈತರು ಫಸಲನ್ನು ಕಳೆದುಕೊಂಡಿರುವುದರಿಂದ ಶೃಂಗೇರಿ ತಾಲ್ಲೂಕನ್ನು ಕೂಡಲೇ ಅತಿವೃಷ್ಟಿ ಪ್ರದೇಶವೆಂದು ಘೋಷಣೆ ಮಾಡಿ ಪರಿಹಾರವನ್ನು ಸರ್ಕಾರ ನೀಡುವಂತೆ ಆಗ್ರಹಿಸಿದರು.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಬೆಳೆ ವಿಮೆ ಹಣವನ್ನು ಶೀಘ್ರವಾಗಿ ಬಿಡುಗಡೆಗೊಳಿಸಲು ಆಗ್ರಹಿಸಿ ರಾಜ್ಯ ರೈತ ಸಂಘ – ಹಸಿರು ಸೇನೆ ಶೃಂಗೇರಿ ವತಿಯಿಂದ ಇದೇ 21.10.2024 ಸೋಮವಾರದಂದು 10.30ಕ್ಕೆ ಶೃಂಗೇರಿ ತಾಲ್ಲೂಕು ಕಚೇರಿ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಲು ಕರೆ ನೀಡಲಾಗಿದೆ.

ಈ ಸಂದರ್ಭದಲ್ಲಿ ರೈತ ಸಂಘದ ಅಧ್ಯಕ್ಷ ಕಾನೊಳ್ಳಿ ಚಂದ್ರಶೇಖರ್, ಚನ್ನಕೇಶವ, ಶ್ರೀಧರ ರಾವ್, ಪೂರ್ಣೇಶ್, ತೆಕ್ಕೂರು ಚಂದ್ರಪ್ಪ, ಕಲವಳ್ಳಿ ಕಳಸಪ್ಪ ಇತರರಿದ್ದರು.


ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; ಎರಡು ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಈ ರೀತಿ ಚೆಕ್ ಮಾಡಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.