ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಡ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ನಿಯೋಜನೆ ಮಾಡಿದೆ.
ಇದನ್ನೂ ಓದಿ: ಕೇಂದ್ರದಿಂದ ಕಡಿಮೆ ದರಕ್ಕೆ ಅಕ್ಕಿ!; FSI ಗೆ ಸೂಚಿಸಿದ ಆಹಾರ ಇಲಾಖೆ

ಕೊಟ್ಟಿಗೆಹಾರ ಅರಣ್ಯ ಇಲಾಖೆಯಲ್ಲಿ ಬೆಂಕಿ ವೀಕ್ಷಕರು ಇದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ಕಿಡಿಗೇಡುಗಳು ಹಚ್ಚುವ ಬೆಂಕಿಯಿಂದ ಉಂಟಾಗುತ್ತಿರುವ ಕಾಡ್ಗಿಚ್ಚು ತಡೆಯಲು ಸಾಧ್ಯವಾಗುತ್ತಿಲ್ಲ. ಬಿದರತಳ ಬಳಿ ಅರಣ್ಯದಲ್ಲಿ ಬೆಂಕಿ ಹರಡಿತ್ತು. ಆದಾದ ಒಂದೇ ವಾರದ ನಂತರ ಘಾಟಿಯಲ್ಲಿ ಅಣ್ಣಪ್ಪಸ್ವಾಮಿ ದೇಗುಲದ ಸಮೀಪ ಮತ್ತೆ ಕಾಡ್ಗಿಚ್ಚು ಕಾಣಿಸಿಕೊಂಡು ನೂರಾರು ಎಕರೆ ಹುಲ್ಲುಗಾವಲು ಅಗ್ನಿಗೆ ಆಹುತಿಯಾಯಿತು. ಇದನ್ನು ತಪ್ಪಿಸಲು ಈಗ ಅರಣ್ಯ ಇಲಾಖೆಯಿಂದ ಆನೆ ಕಾರ್ಯಪಡೆ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಿದೆ.
ಇದನ್ನೂ ಓದಿ: ಪಂಪ್ಸೆಟ್ ಹೊಂದಿರುವವರಿಗೆ ಹೊಸ ಆದೇಶ ಹೊರಡಿಸಿದ ಇಂಧನ ಇಲಾಖೆ; ಏನದು ಹೊಸ ಆದೇಶ, ಇಲ್ಲಿದೆ ನೋಡಿ
ರಸ್ತೆ ಬದಿಯಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚುವುದನ್ನು ತಡೆಯಲು, ರಸ್ತೆಯಲ್ಲಿ ವಾಹನ ನಿಲ್ಲಿಸಿದವರ ಮೇಲೆ ನಿಗಾ ಇಡುವ ಕೆಲಸವನ್ನು ಈ ಸಿಬ್ಬಂದಿ ಮಾಡಲಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)












