ಕೊಪ್ಪ: ಬಿಜೆಪಿ ಯುವ ಮೋರ್ಚಾ ಮುಖಂಡ ಹಾಗೂ ಭಜರಂಗದಳ ಮುಖಂಡನಿಗೆ ಗಡಿಪಾರು ನೋಟೀಸ್ — ಮರುಪರಿಶೀಲನೆಗೆ ಮನವಿ

ಕೊಪ್ಪ: (ನ್ಯೂಸ್‌ ಮಲ್ನಾಡ್‌ ವರದಿ) ಬಿಜೆಪಿ ಯುವ ಮೋರ್ಚಾ ಮುಖಂಡ ಹಾಗೂ ಭಜರಂಗ ದಳ ಮುಖಂಡನಿಗೆ ನೀಡಲಾಗಿರುವ ಗಡಿಪಾರು ನೋಟೀಸ್‌ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿ ನೋಟೀಸ್ ಮರುಪರಿಶೀಲನೆ ಮಾಡುವಂತೆ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.


ನ್ನೂ ಓದಿ: ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ


ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕೊಪ್ಪ ಮಂಡಲ ಘಟಕದ ವತಿಯಿಂದ ತಹಶೀಲ್ದಾರರಿಗೆ ಸಲ್ಲಿಸಲಾದ ಮನವಿಯಲ್ಲಿ, ಬಿಜೆಪಿ ಯುವ ಮೋರ್ಚಾ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಹಾಗೂ ಭಜರಂಗ ದಳ ಮುಖಂಡ ಶ್ಯಾಮ್ ವಿ ಗೌಡ ಅವರಿಗೆ ಗಡಿಪಾರು ಮಾಡುವ ಉದ್ದೇಶದಿಂದ ಸುಳ್ಳು ಹಾಗೂ ಆಧಾರರಹಿತ ಕಾರಣಗಳನ್ನು ನೀಡಿ ನೋಟೀಸ್ ಜಾರಿಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ಸಂವಿಧಾನ ನೀಡಿರುವ ಹೋರಾಟದ ಹಕ್ಕನ್ನು ಹತ್ತಿಕ್ಕುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಲಾಗಿದ್ದು, ನೋಟೀಸಿನಲ್ಲಿ ಉಲ್ಲೇಖಿಸಿರುವ ಸುಲಿಗೆ, ದರೋಡೆ, ಬೆದರಿಕೆ ಹಾಗೂ ಅಕ್ರಮ ಚಟುವಟಿಕೆಗಳಂತಹ ಆರೋಪಗಳು ಸ್ಪಷ್ಟ ಸಾಕ್ಷ್ಯಗಳಿಲ್ಲದೆ ಸೇರಿಸಲಾಗಿದೆ. ನೋಟೀಸ್‌ನಲ್ಲಿ ನೀಡಿರುವ ಕಾರಣಗಳನ್ನು ಸಂಪೂರ್ಣವಾಗಿ ಪರಿಶೀಲಿಸಿದಾಗ ಅವು ಸತ್ಯಕ್ಕೆ ದೂರವಾಗಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.


ನ್ನೂ ಓದಿ: LPG ಗ್ರಾಹಕರಿಗೆ ಮಹತ್ವದ ಸೂಚನೆ; ಆಧಾರ್‌ ಇ ಕೆವೈಸಿ ಮಾಡದಿದ್ರೆ ಸಿಗಲ್ಲ ಸಿಲಿಂಡರ್‌ !


ಹೀಗಾಗಿ ಸುಳ್ಳು ಆರೋಪಗಳಿಂದ ಕೂಡಿರುವ ಈ ನೋಟೀಸ್ ಅನ್ನು ಮರುಪರಿಶೀಲಿಸಿ, ವಾಸ್ತವ ಸಂಗತಿಗಳ ಆಧಾರದ ಮೇಲೆ ನ್ಯಾಯಸಮ್ಮತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.