ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಮಾಜಿ ಶಾಸಕ ಡಿ.ಎನ್ ಜೀವರಾಜ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶ, ಪೋಸ್ಟ್ ಗಳನ್ನು ಹಾಕಲಾಗುತ್ತಿದೆ ಆರೋಪಿಸಿ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನೂ ಓದಿ: 36,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ

ಹಲವು ದಿನಗಳಿಂದ ಮಾಜಿ ಶಾಸಕ ಡಿ.ಎನ್ ಜೀವರಾಜ್ ವಿರುದ್ಧ ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಎಂಬ ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿ ಸಂದೇಶ, ಪೋಸ್ಟ್ಗಳನ್ನು ಹಾಕಲಾಗುತ್ತಿದ್ದು, ಈ ಕುರಿತು ಎನ್.ಆರ್ ಪುರ ತಾಲೂಕು ಬಿಜೆಪಿ ಅಧ್ಯಕ್ಷರಾದ ನಿಲೇಶ್ ರವರ ನೇತೃತ್ವದಲ್ಲಿ ಪೋಲಿಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ದೂರಿನಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಈ ದಿನದಂದು ಬರೋಲ್ಲ ಹಣ…!












