ದೇವರ ದರ್ಶನ ವೇಳೆ ಭಕ್ತರಿಗೆ ವಿದ್ಯುತ್ ಶಾಕ್

 

ಹಾಸನ: (ನ್ಯೂಸ್ ಮಲ್ನಾಡ್ ವರದಿ) ದೇವರ ದರ್ಶನ ವೇಳೆ ಸರದಿ ಸಾಲಿನಲ್ಲಿ ನಿಂತಿದ್ದ 20 ಜನ ಭಕ್ತರಿಗೆ ವಿದ್ಯುತ್ ಶಾಕ್ ತಗುಲಿರುವ ಘಟನೆ ಹಾಸನದಲ್ಲಿ ನಡೆದಿದೆ.

 

ಇದನ್ನೂ ಓದಿ; ಇಂಡಿಯನ್ ಓವರ್ ಸೀಸ್ ಬ್ಯಾಂಕ್‌ ನಲ್ಲಿದೆ ಸ್ಪೆಷಲಿಸ್ಟ್ ಆಫೀಸರ್ ಹುದ್ದೆ; ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಹಾಸನಾಂಬೆ ದೇವಿಯ ದರ್ಶನ ಸರತಿ ಸಾಲಿನ ಕೆಲವರಿಗೆ ಕರೆಂಟ್ ಶಾಕ್ ಹೊಡೆದಿದೆ. ಈ ಸುದ್ದಿ ಕೇಳುತ್ತಿದ್ದಂತೆಯೇ ಭಕ್ತರು ಒಬ್ಬರ ಮೇಲೆ ಒಬ್ಬರು ಬಿದ್ದು ಓಡಿದ್ದಾರೆ. ಇನ್ನು ಕೆಲವರು ಓಡಲು ಆಗದೇ ಕುಸಿದು ಬಿದ್ದಿದ್ದಾರೆ. ಅಂತವರನ್ನು ಸ್ಥಳೀಯರು ಹೊರಗೆಳೆದು ಕರೆತಂದಿದ್ದಾರೆ. ಘಟನೆಯಲ್ಲಿ 20 ಕ್ಕೂ ಹೆಚ್ಚು ಜನರಿಗೆ ಕರೆಂಟ್ ಹೊಡೆದ ಮಾಹಿತಿ ಇದ್ದು, ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

 

ಭಕ್ತರ ಅಸಮಾಧಾನ:
ಈ ಬಗ್ಗೆ ಭಕ್ತರೊಬ್ಬರು ಪ್ರತಿಕ್ರಿಯಿಸಿದ್ದು, ಸರತಿ ಸಾಲಿನಲ್ಲಿ ನಿಂತ ಕೆಲವರಿಗೆ ವಿದ್ಯುತ್ ತಗುಲಿದೆ. ಇದರಿಂದ ಒಬ್ಬರ ಮೇಲೋಬ್ಬರು ಬಿದ್ದಿದ್ದಾರೆ. ಸಾರ್ವಜನಿಕರ ದರ್ಶನಕ್ಕೆ ಸರಿಯಾಗಿ ವ್ಯವಸ್ಥೆ ಮಾಡಿಲ್ಲ. ಕೇವಲ ರಾಜಕಾರಣಗಳಿಗೆ, ಸಿನಿಮಾದವರಿಗೆ, ದೊಡ್ಡ-ದೊಡ್ಡ ವ್ಯಕ್ತಿಗಳಿಗೆ ಮಾತ್ರ ಸಕಲ ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕರು ಅಮ್ಮನ ದರ್ಶನ ಮಾಡುವುದಕ್ಕೆ ಇಕ್ಕಟ್ಟಿನಲ್ಲೇ ಹೋಗಬೇಕು ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದೀಗ ದೇವಸ್ಥಾನ ಆಡಳಿತ ಮಂಡಳಿ ಯಥಾಸ್ಥಿತಿಗೆ ತಂದು ದರ್ಶಕ್ಕೆ ವ್ಯವಸ್ಥೆ ಮಾಡಿಕೊಡಲಾಗಿದೆ ಎಂದು ತಿಳಿದು ಬಂದಿದೆ.

 

ಅರಣ್ಯ-ಕಂದಾಯ ಭೂಮಿ ಸಮಸ್ಯೆ ನಿವಾರಣೆಗೆ ಜಂಟಿ ಸರ್ವೆ ಪರಿಹಾರ- ಸಚಿವ ಈಶ್ವರ ಖಂಡ್ರೆ

ಬೆಂಗಳೂರು:  (ನ್ಯೂಸ್ ಮಲ್ನಾಡ್ ವರದಿ) ರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯ ವಿಚಾರದಲ್ಲಿ ಸಮಸ್ಯೆಗಳಿದ್ದು, ಇದನ್ನು ಜಂಟಿ ಸರ್ವೆಯ ಮೂಲಕ ಬಗೆಹರಿಸಬೇಕಾಗಿದೆ, ಪರಿಭಾವಿತ ಅರಣ್ಯ ಎಂದು ಘೋಷಿಸಲಾಗಿರುವ ಸರ್ವೆ ನಂಬರ್ ಮತ್ತು ಲಭ್ಯ ನಕ್ಷೆಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡುವ ಅಗತ್ಯವಿದೆ ಎಂಬ ಅಭಿಪ್ರಾಯವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.

 

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹಾಗೂ ಜಿಲ್ಲೆಯ ಶಾಸಕರುಗಳೊಂದಿಗೆ ವಿಧಾನಸೌಧದ ಸಮಿತಿ ಸಭಾಂಗಣದಲ್ಲಿಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾಗಿದ್ದ ಅವರು, ಪರಿಭಾವಿತ (ಡೀಮ್ಡ್) ಅರಣ್ಯದ ವಿಚಾರದಲ್ಲಿ ಈಗಾಗಲೇ ಸುಪ್ರೀಂಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಲಾಗಿದೆ. 3.3 ಲಕ್ಷಕ್ಕೂ ಹೆಚ್ಚು ಪ್ರದೇಶವನ್ನು ಪರಿಭಾವಿತ ಅರಣ್ಯ ಎಂದು ಅಂತಿಮಗೊಳಿಸಲಾಗಿದೆ. ಇದರಲ್ಲೂ ಕೆಲವು ಪಟ್ಟಾ ಭೂಮಿ ಇದೆ, ಶಾಲೆ ಇದೆ ಎಂದು ಹೇಳಲಾಗುತ್ತಿದ್ದು, ಈಗ ಪ್ರತಿ ಜಿಲ್ಲೆಯಲ್ಲಿನ ಸಮಸ್ಯೆಗಳ ಬಗ್ಗೆ ಪ್ರತ್ಯೇಕ ಪ್ರಮಾಣಪತ್ರ ಸಲ್ಲಿಸಲು ಸಾಧ್ಯವಿಲ್ಲ. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿ ಸರ್ವೆ ಮಾಡಿಸಿದಲ್ಲಿ ಎಲ್ಲ ಮಾಹಿತಿಯನ್ನೂ ಕ್ರೋಡೀಕರಿಸಿ ಮತ್ತೊಮ್ಮೆ ಸುಪ್ರೀಂಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಬಹುದು. ಆಗ ಮಾತ್ರ ಈ ಸಮಸ್ಯೆ ಪರಿಹರಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಡೀಮ್ಡ್ 1 ಎಂದು ಘೋಷಿಸಲಾಗಿದ್ದನ್ನು ಈಗಾಗಲೇ ಕೈಬಿಡಲಾಗಿದೆ. ಡೀಮ್ಡ್ 2 ಎಂದು ಘೋಷಿಸಿರುವುದು ಅಂತಿಮವಾಗಿದ್ದು, ಇದರಲ್ಲಿ ಏನಾದರೂ ಸಮಸ್ಯೆಗಳಿದ್ದರೆ ಅದನ್ನು ಪರಿಹರಿಸಲು ಪ್ರಯತ್ನಿಸಲಾಗುವುದು, ಜಂಟಿ ಸಮೀಕ್ಷೆ ಪೂರ್ಣವಾಗುವವರೆಗೆ 4(1) ಪ್ರಕ್ರಿಯೆ ನಡೆಸದಂತೆ ಸೂಚಿಸುವುದಾಗಿ ಚಿಕ್ಕಮಗಳೂರು ಭಾಗದ ಶಾಸಕರುಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.

ಕಾಡಾನೆ ಸಮಸ್ಯೆಗೂ ಪರಿಹಾರ:

ಮಳೆ ಕೊರತೆಯಿಂದ ಕಾಡಾನೆಗಳ ಹಾವಳಿಯೂ ಹೆಚ್ಚಳವಾಗುತ್ತಿದ್ದು, ರೈಲ್ವೆ ಬ್ಯಾರಿಕೇಡ್ ಅಳವಡಿಕೆ ಇದಕ್ಕೆ ಸೂಕ್ತ ಪರಿಹಾರ ಮಾರ್ಗವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಇಲಾಖೆಗೆ ಸೂಚಿಸಲಾಗಿದೆ ಎಂದರು. ಚಿಕ್ಕಮಗಳೂರು ಭಾಗದಲ್ಲಿ ಬೀಡು ಬಿಟ್ಟಿರುವ ಆನೆಗಳನ್ನು ಕಾಡಿಗೆ ಮರಳಿಸಲು ಮತ್ತು ಪುಂಡಾನೆಯನ್ನು ಹಿಡಿದು ಆನೆ ಶಿಬಿರಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಇನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಮಾತನಾಡಿ, ಒಂದು ವಾರದೊಳಗೆ ಪರಿಭಾವಿತ ಅರಣ್ಯ, ಮೀಸಲು ಅರಣ್ಯದ ಮಾಹಿತಿಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡಲಾಗುವುದು. ಈಗ ಅತ್ಯಾಧುನಿಕ ಡ್ರೋನ್ ನಂತಹ ಸಲಕರಣೆ ಇದ್ದು, ಜಂಟಿ ಸರ್ವೆಯನ್ನು ಮಾಡಲು ಸಹಕರಿಸಲಾಗುವುದು ಎಂದು ತಿಳಿಸಿದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.