ಧರ್ಮಸ್ಥಳ ಸಂಘ ಮೈಕ್ರೋ ಫೈನಾನ್ಸ್‌ ವ್ಯಾಪ್ತಿಗೆ ಬರುತ್ತಾ? ಈ ಬಗ್ಗೆ ಕೆ.ಎನ್‌ ರಾಜಣ್ಣ ಹೇಳಿದ್ದೇನು…?

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಧರ್ಮಸ್ಥಳ ಸಂಘ ಮೈಕ್ರೋ ಫೈನಾನ್ಸ್‌ ವ್ಯಾಪ್ತಿಗೆ ಬರಲ್ಲ ಎಂದು ಸಚಿವ ಕೆ.ಎನ್‌ ರಾಜಣ್ಣ ಹೇಳಿದ್ದಾರೆ.


ಇದನ್ನೂ ಓದಿ: ಕೇಂದ್ರದಿಂದ ಕಡಿಮೆ ದರಕ್ಕೆ ಅಕ್ಕಿ!; FSI ಗೆ ಸೂಚಿಸಿದ ಆಹಾರ ಇಲಾಖೆ


ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಸಂಘವನ್ನು ಸ್ವ-ಸಹಾಯ ಸಂಘ ಎಂದು ಮಾಡಿ ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ವ-ಸಹಾಯ ಸಂಘಗಳಿಗೆ ಸಾಲ ನೀಡುತ್ತಾರೆ. ಕಿರುಕುಳ ನೀಡಿದ್ದಾರೆ ಎಂದು ನಮಗೆ ಯಾವುದೇ ದೂರು ಬಂದಿಲ್ಲ ಎಂದರು.

ಜನರಿಗೆ ತೊಂದರೆ ಕೊಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ:
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರವಾಗಿ ಮಾತನಾಡಿ ಅವರು, ಕಿರುಕುಳ ಕೊಡುವವರಿಗೆ ಕಠಿಣ ಶಿಕ್ಷೆ ಆಗಬೇಕು. ಕೆಲ ಸಂಸ್ಥೆಗಳು ಆರ್‌ಬಿಐ ಅನುಮತಿ ಪಡೆದು ಫೈನಾನ್ಸ್‌ ನಡೆಸುತ್ತಾರೆ. ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ಕೊಟ್ಟಾಗ ನಾವು ಕ್ರಮ ಕೈಗೊಳ್ಳಬಹುದು. ಹೀಗಾಗಿ ಸಿಎಂ ಸಭೆ ಮಾಡಿ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಇಂತಹ ಕಿರುಕುಳ ತಡೆಗೆ ಹೊಸ ಕಾಯ್ದೆ ತರುವ ಬಗ್ಗೆಯೂ ಚರ್ಚೆ ಆಗಿದೆ. ಈ ಬಗ್ಗೆ ಮುಂದಿನ ಅಧಿವೇಶನದಲ್ಲಿ ಕಾಯ್ದೆ ಮಂಡನೆ ಆಗಲಿದೆ ಎಂದರು.


ಇದನ್ನೂ ಓದಿ: ಪಂಪ್ಸೆಟ್ ಹೊಂದಿರುವವರಿಗೆ ಹೊಸ ಆದೇಶ ಹೊರಡಿಸಿದ ಇಂಧನ ಇಲಾಖೆ; ಏನದು ಹೊಸ ಆದೇಶ, ಇಲ್ಲಿದೆ ನೋಡಿ


ಮುಂದಿನ ದಿನಗಳಲ್ಲಿ ಮೀಟರ್ ಬಡ್ಡಿ ದಂಧೆ ಹಾಗೂ ಮೈಕ್ರೋ ಫೈನಾನ್ಸ್ ಹಾವಳಿಗೆ ಬ್ರೇಕ್ ಬೀಳುತ್ತೆ ಅನ್ನೋ ವಿಶ್ವಾಸ ನನಗಿದೆ ಎಂದರು.


ಇದನ್ನೂ ಓದಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ; ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಏನೇನು ಚರ್ಚೆಯಾಯ್ತ?; ಖಡಕ್ ಎಚ್ಚರಿಕೆ ನೀಡಿದ್ದು ಯಾರಿಗೆ?


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.