
ಹರಿಹರಪುರ: (ನ್ಯೂಸ್ ಮಲ್ನಾಡ್ ವರದಿ) ಸಿನಿಮಾ ಶೂಟಿಂಗ್ ವೇಳೆ ಕುಸಿದು ಬಿದ್ದು ನಿರ್ದೇಶಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರದಲ್ಲಿ ನಡೆದಿದೆ. ಸಂಗೀತ್ ಸಾಗರ್ ಹೃದಯಾಘಾತದಿಂದ ಸಾವನ್ನಪ್ಪಿರುವ ನಿರ್ದೇಶಕ.
ಇದನ್ನೂ ಓದಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ: ಕೂಡಲೇ ಅರ್ಜಿ ಸಲ್ಲಿಸಿ

8 ಕನ್ನಡ ಸಿನಿಮಾ ನಿರ್ದೇಶಿಸಿರುವ ಸಂಗೀತ್ ಸಾಗರ್ ಪಾತ್ರಧಾರಿ ಎನ್ನುವ ಸಿನಿಮಾ ಶೂಟಿಂಗ್ ಮಾಡುವಾಗ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.















