ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯಿಂದ ಬಂದ ಮಂತ್ರಾಕ್ಷತೆ ಜ.1 ರಿಂದ ವಿತರಣೆ

ಶ್ರೀ ಜಗದ್ಗುರು ಬದರೀ ಶಂಕರಾಚಾರ್ಯ ಸಂಸ್ಥಾನಂ ಶ್ರೀ ಕ್ಷೇತ್ರ ಶಕಟಪುರಂ ಶ್ರೀಮಠದಲ್ಲಿ ಶ್ರೀ ಜಗದ್ಗುರು ಆಚಾರ್ಯ ಮಹಾಸ್ವಾಮಿಗಳ ಅನುಗ್ರಹ ಹಾಗೂ ಅಪ್ಪಣೆಯಂತೆ ಇಂದು (ಬುಧವಾರ) ಲೋಕಕಲ್ಯಾಣಾರ್ಥವಾಗಿ, ಸಮಾಜದ ಒಳಿತಿಗಾಗಿ ಮನ್ಯುಸೂಕ್ತ ಪಾರಾಯಣ ಹಾಗೂ ಗಾಯತ್ರಿ ಜಪದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 

ಇದನ್ನೂ ಓದಿ; ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ

ಶಕಟಪುರ ವತಿಯಿಂದ 11 ಲಕ್ಷ ದೇಣಿಗೆ ಹಸ್ತಾಂತರ:
ಶ್ರೀ ಜಗದ್ಗುರು ಬದರೀ ಶಂಕರಾಚಾರ್ಯ ಸಂಸ್ಥಾನ ಶಕಟಪುರ ವತಿಯಿಂದ ಶ್ರೀ ರಾಮಜನ್ಮಭೂಮಿ ಟ್ರಸ್ಟ್ ಗೆ ಹನ್ನೊಂದು ಲಕ್ಷ ದೇಣಿಗೆಯನ್ನು ಹಸ್ತಾಂತರಿಸಿದ್ದಾರೆ.

ಇದನ್ನೂ ಓದಿ; ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ;  ನೇರ ಸಂದರ್ಶನದ ಮೂಲಕ ಆಯ್ಕೆ

ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯಿಂದ ಬಂದ ಮಂತ್ರಾಕ್ಷತೆ ವಿತರಣೆ:
ಶ್ರೀ ಕ್ಷೇತ್ರ ಶಕಟಪುರಂನ ಶ್ರೀಶ್ರೀ ಕೃಷ್ಣಾನಂದತೀರ್ಥ ಮಹಾಸ್ವಾಮಿಗಳು, ಅಯೋದ್ಯೆಯಿಂದ ಬಂದ ಮಂತ್ರಾಕ್ಷತೆಯನ್ನು ಪೂಜಿಸಿ, ತಮ್ಮ ಕರಕಮಲಗಳಿಂದ ಆಶೀರ್ವಚನ ಮುಖೇನ ತಾಲ್ಲೂಕಿನ ನಿರ್ವಹನಾ ತಂಡಕ್ಕೆ ನೀಡಿದರು.

 

ಇದರ ಅಂಗವಾಗಿ ಜ.1 ರಿಂದ ಜ.15ರ ತನಕ ಪ್ರತಿಯೊಂದು ಮನೆ ಮನೆಗೆ ಮಂತ್ರಾಕ್ಷತೆ, ಕರಪತ್ರ ವಿತರಣೆ ಅಭಿಯಾನ ಹಮ್ಮಿಕೊಳ್ಳಲಾಗುವುದು. ಜ.07 ರಂದು ಮಹಾ ಸಂಪರ್ಕ ಅಭಿಯಾನ ದಿನ, ಜ.22ರಂದು ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಂದು ಎಲ್ಲರೂ ನಿಮ್ಮ ಮನೆಯ ಹತ್ತಿರದ ದೇವಸ್ಥಾನಗಳಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ರ ತನಕ ಶ್ರೀರಾಮನಾಮ ಭಜನೆ, ಪ್ರಾರ್ಥನೆ, ಪೂಜೆ ಕಾರ್ಯಕ್ರಮ ನಡೆಸಬೇಕು. ಸಂಜೆ 5ಕ್ಕೆ ಪ್ರತಿ ಮನೆಯ ಬಾಗಿಲ ಮುಂದೆ 5 ದೀಪಗಳನ್ನು ಹಚ್ಚಬೇಕು ಎಂದು ತಾಲೂಕಿನಲ್ಲಿ ನಡೆಯುವ ಕಾರ್ಯಕ್ರಮದ ಬಗ್ಗೆ ಜಿಲ್ಲಾ ಸಂಯೋಜಕರಾದ ಶ್ರೀ ರಾಜೇಂದ್ರ ಕುಮಾರ್ ರವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ RSS ಶೃಂಗೇರಿ ಜಿಲ್ಲಾ ಸಂಘಚಾಲಕ್ ಶ್ರೀ ಟಿ.ಕೆ.ನಾರಾಯಣ, ತಾಲೂಕು ಸಂಯೋಜಕ ಶ್ರೀ ಗುರುಮೂರ್ತಿ, ಶ್ರೀ ಶಶಿಶೇಖರ್, ಶ್ರೀ ಪರಾಶರ ಶೃಂಗೇರಿ ಮತ್ತು ತಾಲ್ಲೂಕು ತಂಡದ ಸದ್ಯರು ಇದ್ದರು.

ಶೃಂಗೇರಿಯಲ್ಲಿ ಪವಿತ್ರ ಮಂತ್ರಾಕ್ಷತೆ ವಿತರಣೆ:
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಭಾರತೀಬೀದಿಯಲ್ಲಿರುವ ಶ್ರೀಚಪ್ಪರದಾಂಜನೇಯ ಸ್ವಾಮಿ ದೇವಾಲಯದ ಸಭಾಂಗಣದಲ್ಲಿ ಶ್ರೀರಾಮ ಮಂದಿರ ಹಾಗೂ ರಾಮ ಲಲ್ಲಾನ ಪ್ರಾಣಪ್ರತಿಷ್ಠಾಪನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಅಯೋಧ್ಯೆಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯನ್ನು ಮಂಗಳವಾರ ವಿತರಿಸಲಾಯಿತು.

 

ಕಾರ್ಕಳ: ಖಾಸಗಿ ಬಸ್ ಹಾಗೂ ಬೊಲೆರೊ ಕಾರು ಡಿಕ್ಕಿ | ಜಯಪುರ ಮೂಲದ ವ್ಯಕ್ತಿ ಸಾವು, ಇಬ್ಬರು ಗಂಭೀರ

ಕಾರ್ಕಳ/ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ ಹಾಗೂ ಬೊಲೆರೊ ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ನಿಟ್ಟೆ ಗ್ರಾಮದ ಮಂಜರರ್ ಪಲ್ಕೆ ಎಂಬಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ ಶಿವಪ್ಪ (48) ಮೃತಪಟ್ಟವರು. ಮಂಜು (45), ಸುಜಯ (28) ಗಾಯಗೊಂಡವರು. ತಾಲ್ಲೂಕಿನ ನಿಟ್ಟೆ ಗ್ರಾಮದ ಮಂಜರರ್ ಪಲ್ಕೆ ಎಂಬಲ್ಲಿ ನಂದಳಿಕೆ ಕಡೆಯಿಂದ ಬರುತ್ತಿದ್ದ ಬೊಲೆರೊ ಕಾರ್ಕಳ ಕಡೆಯಿಂದ ಬರುತ್ತಿದ್ದ ಮುಂಬೈ ಬಸ್ ಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ; NTPC ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ

ತಾಲ್ಲೂಕಿನ ನಂದಳಿಕೆಯ ತಮ್ಮ ಕುಟುಂಬದ ಮನೆಗೆ ದೇವರ ಕಾರ್ಯಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಜಯಪುರದಿಂದ ಬೆಳಿಗ್ಗೆ ಬಂದಿದ್ದ ಕುಟುಂಬದ ಸದಸ್ಯರು ಮನೆಯಲ್ಲಿ ಪೂಜೆ ಮುಗಿಸಿ ಮಧ್ಯಾಹ್ನ ಹಿಂದಿರುಗುತ್ತಿದ್ದರು. ಮೃತಪಟ್ಟ ಶಿವಪ್ಪ ಕುಟುಂಬದ ಗುರಿಕಾರನಾಗಿ ಮುಂದೆ ನಿಂತು ದೈವದ ಕೆಲಸದ ವಿಧಿವಿಧಾನಗಳನ್ನು ನಡೆಸಿಕೊಟ್ಟಿದ್ದರು ಎನ್ನಲಾಗಿದೆ.

ಇದನ್ನೂ ಓದಿ; ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಖಾಸಗಿ ಬಸ್ ನಲ್ಲಿದ್ದ 12 ಮಂದಿ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.