ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ತುಂಗಾನದಿ, ಭದ್ರಾ ನದಿ, ಹೇಮಾವತಿ ನದಿ ಸೇರಿದಂತೆ ಜಿಲ್ಲೆಯಲ್ಲಿನ ನದಿಗಳು ಅಪಾಯಕಾರಿ ಮಟ್ಟ ಮೀರಿ ರಸ್ತೆಯ ಮೇಲೆ ಹರಿಯುತ್ತಿದೆ. ಅಲ್ಲದೆ ಮುಳ್ಳಯ್ಯನಗಿರಿ ಮಾರ್ಗ ಮಧ್ಯೆ, ಹೊರನಾಡು, ಮೂಡಿಗೆರೆ, ಶೃಂಗೇರಿ ಮತ್ತು ಜಿಲ್ಲೆಯ ಇತರೆ ಪ್ರವಾಸಿ ತಾಣಗಳಲ್ಲಿ ಭೂಕುಸಿತ ಉಂಟಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರು ಚಿಕ್ಕಮಗಳೂರು ಜಿಲ್ಲಾ ಪ್ರವಾಸವನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಅನಧಿಕೃತ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್ ನೀಡಿದ ಇಂಧನ ಸಚಿವ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ

ಆದೇಶದಲ್ಲಿ ಏನಿದೆ?;
* ಸಾರ್ವಜನಿಕರು/ಪ್ರವಾಸಿಗರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು.
* ಅತಿಯಾದ ಮಳೆಯಿಂದ ಧರೆ, ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಚಾರಣಿಗರು ಟ್ರಕ್ಕಿಂಗ್ ಮಾಡುವುದನ್ನು ತಾತ್ಕಾಲಿಕವಾಗಿ ಮುಂದೂಡುವುದು.
* ಹೋಂ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳುವ ಟ್ರಕ್ಕಿಂಗ್ ಅನ್ನು ಸಧ್ಯಕ್ಕೆ ಸ್ಥಗಿತಗೊಳಿಸುವುದು. ರಾಜ್ಯದ ವಿವಿಧ ಸ್ಥಳಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರು ಚಿಕ್ಕಮಗಳೂರು ಜಿಲ್ಲಾ ಪ್ರವಾಸವನ್ನು ತಾತ್ಕಾಲಿಕವಾಗಿ ಮುಂದೂಡುವುದು.
ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಹೊಂದಿರುವವರಿಗೆ ಮತ್ತೊಂದು ಮುಖ್ಯ ಮಾಹಿತಿ; ಏನದು? ಇಲ್ಲಿದೆ ನೋಡಿ
ಈ ಮೇಲ್ಕಂಡ ಸೂಚನೆಗಳನ್ನು 15.08.2024 ರ ವರೆಗೆ ಅಥವಾ ಜಿಲ್ಲಾಧಿಕಾರಿಯ ಮುಂದಿನ ಆದೇಶದ ವರೆಗೆ ಪಾಲಿಸುವ ಮೂಲಕ ಸಾರ್ವಜನಿಕರು/ಪ್ರವಾಸಿಗರು ಯಾವುದೇ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೊಡದೆ ಜಿಲ್ಲಾಡಳಿತಕ್ಕೆ ಸಹಕಾರ ನೀಡುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?













