ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಿಂದ ನಾಲ್ವರನ್ನು ಗಡಿಪಾರು ಮಾಡಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆಂದು ನರಸಿಂಹರಾಜಪುರ ತಾಲೂಕಿನ ಮೂವರು ಹಾಗೂ ತರೀಕೆರೆಯ ಓರ್ವ ವ್ಯಕ್ತಿಯನ್ನು ಗಡಿಪಾರು ಮಾಡುವಂತೆ ಆದೇಶಿಸಲಾಗಿದೆ.
ನರಸಿಂಹರಾಜಪುರ ತಾಲೂಕಿನ ಇಂದಿರಾನಗರದ ಹಿಳುವಳ್ಳಿ ನಿವಾಸಿ ಫೈಜುಲ್ಲಾ ಷರೀಫ್ (49), ನರಸಿಂಹರಾಜಪುರ ತಾಲೂಕಿನ ಮೇಗರಮಕ್ಕಿ ನಿವಾಸಿ ಕೆ.ವಿ. ಪ್ರದೀಪ್ (38) ಹಾಗೂ ನರಸಿಂಹರಾಜಪುರ ತಾಲೂಕಿನ ನೇಮನಹಳ್ಳಿ ನಿವಾಸಿ ಮನೋರಂಜನ್ (33) ಹಾಗೂ ತರೀಕೆರೆ ತಾಲೂಕಿನ ಎಂ.ಸಿ ಹಳ್ಳಿ ನಿವಾಸಿ ಮೌಂಟ್ ಬ್ಯಾಟನ್ ಆರೋಗ್ಯ ಸ್ವಾಮಿ (31) ಇವರನ್ನು ಗಡಿಪಾರು ಮಾಡುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಇದನ್ನೂ ಓದಿ: ಯಜಮಾನಿಯರಿಗೆ ಗುಡ್ ನ್ಯೂಸ್; ಏಪ್ರಿಲ್, ಮೇ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!
ಅಲ್ಲದೇ ಇನ್ನು ಮುಂದೆಯೂ ಜಿಲ್ಲೆಯಲ್ಲಿ ಸಮಾಜದಲ್ಲಿ ಕಾನೂನು ಬಾಹಿರ ಕೃತ್ಯಗಳನ್ನೆಸಗುವುದು, ನೈತಿಕ ಪೊಲೀಸ್ ಗಿರಿ, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ವದಂತಿಗಳನ್ನು ಸೃಷ್ಟಿಸಿ ಹರಡುವುದು ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯನ್ನುಂಟು ಮಾಡಿ, ಸಾರ್ವಜನಿಕ ಶಾಂತಿಗೆ ಭಂಗ ತರುವುದು ಕಂಡುಬಂದಲ್ಲಿ ಅಂತಹ ವ್ಯಕ್ತಿಗಳ ಮೇಲೆ ಜಿಲ್ಲೆಯಿಂದ ಗಡಿಪಾರು ಮಾಡಲು ಸೂಕ್ತ ಕಾನೂನುಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: ರಾಜ್ಯದ ಎಲ್ಲಾ ಶಾಲೆಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ












