ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಖ್ಯಾತ ಛಾಯಾಗ್ರಾಹಕ, ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಫೋಟೊಗ್ರಾಫರ್ ನಂದನ್ (57) ನಿಧನರಾಗಿದ್ದಾರೆ.
ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಎಲಿಮಿನೇಷನ್!

ಅನಾರೋಗ್ಯ ಹಿನ್ನೆಲೆ ಕಳೆದ ರಾತ್ರಿ ನಂಜಪ್ಪ ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗ ರೈಲ್ವೆ ನಿಲ್ದಾಣ ಸಮೀಪ ಇರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಮೃತರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ.

ಇದನ್ನೂ ಓದಿ: ಕೆನರಾ ಬ್ಯಾಂಕ್ ನಲ್ಲಿ ಜಾಬ್ ಆಫರ್; ವಿದ್ಯಾರ್ಹತೆ, ಸಂಬಳ ಕುರಿತು ಇಲ್ಲಿದೆ ಡಿಟೈಲ್ಸ್
ಪಬ್ಲಿಕ್ ಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಕೆ.ವಿ. ನಿಧನ!:
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಬ್ಲಿಕ್ ಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಕೆ.ವಿ. (39) ಶಶಿಧರ್ ನಿನ್ನೆ ಸಂಜೆ 5:45ರ ವೇಳೆಗೆ ಅಕಾಲಿಕ ನಿಧನ ಹೊಂದಿದ್ದಾರೆ.
ಪಬ್ಲಿಕ್ ಟಿವಿಯಲ್ಲಿ ಕಳೆದ 6 ವರ್ಷಗಳಿಂದ ಶಿವಮೊಗ್ಗ ಜಿಲ್ಲಾ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಶಶಿಧರ್ ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದವರು.
ಇದನ್ನೂ ಓದಿ: ಡಿಸೆಂಬರ್ ತಿಂಗಳ ಗೃಹಲಕ್ಷ್ಮಿ ಯೋಜನೆಯ 2000 ಹಣ ಈ ದಿನ ಜಮಾ!; ಹಣ ಬಾರದೇ ಇದ್ದಲ್ಲಿ ಜಸ್ಟ್ ಈ ರೀತಿ ಮಾಡಿ
ಇಂದು ಅವರ ಹುಟ್ಟೂರಿನಲ್ಲಿ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ.
ಇದನ್ನೂ ಓದಿ: 17,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ













