ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಜ್ಞಾನ ಭಾರತಿ ವಿದ್ಯಾಕೇಂದ್ರ ಮಾನಗಾರು, ಹಾಗೂ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಚಿಕ್ಕಮಗಳೂರು ಜಿಲ್ಲಾಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆ ಶ್ರೀ ಜೆಸಿಬಿಎಂ ಕಾಲೇಜಿನಲ್ಲಿ ನಡೆಯಿತು.

ಇದನ್ನೂ ಓದಿ: ಈ ನಿಯಮಗಳನ್ನು ಪಾಲಿಸದಿದ್ದರೆ ರೇಷನ್ ಕಾರ್ಡ್ ರದ್ದು

14 ವರ್ಷದ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ನಲ್ಲಿ ಜ್ಞಾನಭಾರತಿ ಶಾಲೆ, ಶೃಂಗೇರಿ ಪ್ರಥಮ ಸ್ಥಾನವನ್ನು ಹಾಗೂ ಸೆಂಟ್ ಜೋಸೆಫ್ ಪ್ರೌಢಶಾಲೆ ದ್ವಿತೀಯ ಸ್ಥಾನವನ್ನು ಪಡೆಯಿತು
14 ವರ್ಷದ ಬಾಲಕರ ಶಟಲ್ ಬ್ಯಾಡ್ಮಿಂಟನ್ ನಲ್ಲಿ ಕಡೂರು ಶಾಲೆ, ಪ್ರಥಮ ಸ್ಥಾನವನ್ನು, ಮೂಡಿಗೆರೆ ದ್ವಿತೀಯ ಸ್ಥಾನವನ್ನು ಪಡೆದರೆ, 17 ವರ್ಷದ ಬಾಲಕರ ಶಟಲ್ ಬ್ಯಾಡ್ಮಿಂಟನ್ ನಲ್ಲಿ ಜ್ಞಾನಭಾರತಿ ಶಾಲೆ ಶೃಂಗೇರಿ ಪ್ರಥಮ ಸ್ಥಾನವನ್ನು , ಪಿಪಿಸಿ ದ್ವಿತೀಯ ಸ್ಥಾನವನ್ನು ಪಡೆಯಿತು.

ಇದನ್ನೂ ಓದಿ: 6 ಜಿಲ್ಲೆಗಳಲ್ಲಿ ಪ್ರಧಾನಿ ಧನಧಾನ್ಯ ಯೋಜನೆ ಜಾರಿ
17 ವರ್ಷದ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ನಲ್ಲಿ ತೊರೆಹಡ್ಲು ಶಾಲೆ ಶೃಂಗೇರಿ ಪ್ರಥಮ ಸ್ಥಾನವನ್ನು ಹಾಗೂ ಮೂಡಿಗೆರೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು.

ಜಿಲ್ಲಾಮಟ್ಟದ 17 ವರ್ಷದ ಚೆಸ್ ಪಂದ್ಯಾವಳಿಯಲ್ಲಿ ಸನ್ನಿಧಿ ಬಾಪಟ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ನಿವೃತ್ತಿ ದೈಹಿಕ ಶಿಕ್ಷಕರಾದ ಸುರೇಶ್ ಮತ್ತು ಪಾಟೀಲ್ ಅವರಿಗೆ ಸನ್ಮಾನಿಸಲಾಯಿತು.ತಾಲ್ಲೂಕು ಶಿಕ್ಷಣಾಧಿಕಾರಿಗಳು, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ, ವಿವಿಧ ಶಾಲೆಗಳ ಶಿಕ್ಷಕರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: 18,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ; ಇಲ್ಲಿದೆ ಡಿಟೈಲ್ಸ್













