ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಎನ್.ಆರ್.ಐ ನ ಉಪಾಧ್ಯಕ್ಷರನ್ನಾಗಿ ಡಾ.ಆರತಿಕೃಷ್ಣ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ; ಕರ್ನಾಟಕದ ಕೆಲವು ಭಾಗದಲ್ಲಿ ಭಾರಿ ಮಳೆ ಸಾಧ್ಯತೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಅನಿವಾಸಿ ಭಾರತೀಯ ಕೋಶ ಇದರ ಉಪಾಧ್ಯಕ್ಷರನ್ನಾಗಿ ಕರ್ನಾಟಕ ಸರ್ಕಾರವು ನೇಮಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-17.10.2023
ಆರತಿ ಕೃಷ್ಣ ಅವರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾನೆಯವರು, ಇವರ ತಂದೆ ಬೇಗಾನೆ ರಾಮಯ್ಯ ಅವರು ಈ ಹಿಂದೆ ಶೃಂಗೇರಿ ಕ್ಷೇತ್ರದ ಶಾಸಕರಾಗಿದ್ದರು.
ಚಿಕ್ಕಮಗಳೂರು: ವಿಷ ಸೇವಿಸಿ ಅನುಮಾನಾಸ್ಪದ ವ್ಯಕ್ತಿ ಸಾವು
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ವಿಷ ಸೇವಿಸಿ ಅನುಮಾನಾಸ್ಪದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ.
ಮೂಡಿಗೆರೆಯ ಗಂಗನ ಮಕ್ಕಿಯ ಪೆಟ್ರೋಲ್ ಬಂಕ್ ಸಮೀಪ ವಿಷ ಸೇವಿಸಿ ಅನುಮಾನಾಸ್ಪದ ವ್ಯಕ್ತಿ ಸಾವನ್ನಪ್ಪಿದ್ದು, ಆತನ ಶವ ಮೂಡಿಗೆರೆ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ.
ಇನ್ನು ಈತನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












