ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಕಳೆದ ಕೆಲವು ದಿನಗಳ ಹಿಂದೆ ಅತ್ಯಾಚಾರ ಯತ್ನ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ನರಸಿಂಹರಾಜಪುರ ವೈದ್ಯಾಧಿಕಾರಿ ಡಾ .ಎಲ್ಡೋಸ್ ಜಾಮೀನು ರದ್ದಾಗಿದ್ದು ಜೈಲು ಪಾಲಾಗಿದ್ದಾನೆ. ಇಂದು ವಿಚಾರಣೆ ನಡೆಸಿದ ನರಸಿಂಹರಾಜಪುರ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ರದ್ದುಗೊಳಿಸಿ ಆದೇಶಿಸಿದ್ದಾರೆ.
ವರ್ಗೀಸ್ ಗೆ ಗೇಟ್ ಪಾಸ್ ಆದೇಶ

ಘಟನೆ ನಂತರ ಡಾ. ವರ್ಗೀಸ್ ಅನ್ನು ನರಸಿಂಹರಾಜಪುರ ತಾಲ್ಲೂಕು ಆಸ್ಪತ್ರೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ ಮಾಡಲಾಗಿತ್ತು. ಡಾ. ಎಲ್ಡೋಸ್ ವಿರುದ್ಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 354 ಅನ್ವಯ ಕೇಸ್ ದಾಖಲಾಗಿತ್ತು. ಬಳಿಕ ಆರೋಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇಂದು ವಿಚಾರಣೆ ನಡೆಸಿದ ನರಸಿಂಹರಾಜಪುರ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ರದ್ದುಗೊಳಿಸಿ ಆದೇಶಿಸಿದ್ದಾರೆ.

ಘಟನೆಯ ವಿವರ:
ನೊಂದ ಮಹಿಳೆಯೂ ಇಲಾಖೆಯ ಡಿ ದರ್ಜೆ ಸಿಬ್ಬಂದಿ ಆಗಿದ್ದು ಬಾಳೆಹೊನ್ನೂರು ವಸತಿ ಗೃಹಕ್ಕೆ ಬರಲು ಹೇಳಿದ್ದನು, ಈತನ ಬಗ್ಗೆ ತಿಳಿದಿದ್ದ ಮಹಿಳೆ ತನ್ನ ಗಂಡ ಹಾಗೂ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದರು, ಬಾಳೆಹೊನ್ನೂರು ಪಟ್ಟಣದ ಸರ್ಕಾರಿ ವೈದ್ಯರ ವಸತಿಗೃಹದಲ್ಲಿ ಮಹಿಳೆಯೊಂದಿಗೆ ಏಕಾಂತ ಸಮಯ ಕಳೆಯಲು ತಯಾರಾಗಿದ್ದಾಗ ಮಹಿಳೆಯ ಪತಿ ಹಾಗೂ ಸಂಬಂಧಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದನು, ಈತನ ಘನಂದಾರಿ ಕೆಲಸಕ್ಕೆ ಸಾರ್ವಜನಿಕರು ಹಾಗೂ ಕುಟುಂಬಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದರು.
ಈತನ ವಿರುದ್ಧ ಮಹಿಳಾ ಸಿಬ್ಬಂದಿಗಳಿಗೆ ಕಿರುಕುಳ ಸಂಬಂಧ ಈ ಹಿಂದೆಯೂ ಹಲವು ಆರೋಪಗಳು ಕೇಳಿಬಂದಿದ್ದವು, ನಾಯಿ ಬಾಲ ಡೊಂಕು ಎಂಬಂತೆ ತನ್ನ ಬುದ್ಧಿಯನ್ನು ಬಿಡದ ಕಾರಣ ಇಂದು ಡಾಕ್ಟರಪ್ಪ ಜೈಲು ಪಾಲಾಗಿದ್ದಾನೆ.













