ಚಿಕ್ಕಮಗಳೂರು ಜಿಲ್ಲೆಗೆ ನೂತನ ಡಿಎಚ್‌ಒ ಆಗಿ ಡಾ. ಮಂಜುನಾಥ್ ಹೆಚ್.ಕೆ ನೇಮಕ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸೇರಿದಂತೆ ಹಲವು ಹಿರಿಯ ವೈದ್ಯಾಧಿಕಾರಿಗಳನ್ನು ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಈ ಆದೇಶದಂತೆ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ)ಯಾಗಿ ಡಾ. ಮಂಜುನಾಥ್ ಹೆಚ್.ಕೆ. ಅವರನ್ನು ನೇಮಕ ಮಾಡಲಾಗಿದೆ. ಅವರು ಇದುವರೆಗೆ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಕಲ್ಯಾಣಾಧಿಕಾರಿ (ಆರ್‌ಸಿಎಚ್‌ಒ)ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ರಾಜ್ಯ ಮಟ್ಟದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಧಾರವಾಡ, ದಾವಣಗೆರೆ, ಹಾವೇರಿ ಹಾಗೂ ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವರ್ಗಾವಣೆ ನಡೆದಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಡಾ. ಮಂಜುನಾಥ್ ಹೆಚ್.ಕೆ. ನೂತನ ಡಿಎಚ್‌ಒ ಆಗಿ ನೇಮಕಗೊಂಡಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.