ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಇದೇ ಆಗಸ್ಟ್ 15ರಿಂದ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಸಾಂಪ್ರಾದಾಯಿಕ ಉಡುಗೆಯಲ್ಲಿ ಬರುವಂತೆ ಸೂಚಿಸಿ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ

ಈ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ಅಲ್ಲದೆ ಶೃಂಗೇರಿ, ಕೊಪ್ಪ ಹಾಗೂ ಎನ್.ಆರ್.ಪುರ ಪುರೋಹಿತರಿಂದ ಮಠದ ಆಡಳಿತಾಧಿಕಾರಿ ಮುರುಳಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
ಗುರು ಪರಂಪರೆಯಲ್ಲಿ ತನ್ನದೇ ಆದ ವೈಶಿಷ್ಟ್ಯತೆಯಿಂದ ಕೂಡಿರೋ ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರ ಶೃಂಗೇರಿ ಶಾರದಾ ದೇವಾಲಯದಲ್ಲಿ ಧಾರ್ಮಿಕ ವಾತಾವರಣ ಕಾಯುವ ವಸ್ತ್ರಸಂಹಿತೆ ನಿರ್ಧಾರಕ್ಕೆ ಅಭಿನಂದನೆ, ಸ್ವಾಗತವನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: ಈ ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ
ಪುರುಷರಾದಲ್ಲಿ ಧೋತಿ ಶಲ್ಯ ಮತ್ತು ಉತ್ತರೀಯ ಹಾಗೂ ಮಹಿಳೆಯರು ಸೀರೆ ರವಿಕೆ, ಸಲ್ವಾರ್ – ದುಪಟ್ಟ ಅಥವಾ ಲಂಗ ದಾವಣಿಗಳಂತ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ದೇವರ ದರ್ಶನ ಮಾಡಬಹುದು.
ಇನ್ನು ಶ್ರೀಮಠದ ಗುರುನಿವಾಸದಲ್ಲಿ ಪಾದಪೂಜೆ, ಭಿಕ್ಷಾವಂದನೆ ಹಾಗೂ ಗುರು ದರ್ಶನ ಸಂದರ್ಭದಲ್ಲಿ ಈ ಹಿಂದಿನಿಂದಲೂ ಈ ನಿಯಮ ಜಾರಿಯಲ್ಲಿದ್ದು, ಆಗಸ್ಟ್ 15 ರಿಂದ ಶ್ರೀ ಮಠದಲ್ಲಿ ಭಕ್ತರು ಕಟ್ಟುನಿಟ್ಟಾಗಿ ಪಾಲಿಸಲು ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: ಈ 14 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಹಣ ಇಂದು ರಿಲೀಸ್.!; ಆದರೆ, ಈ ಕೆಲಸ ಮಾಡುವುದು ಕಡ್ಡಾಯ












