ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಜಯಪುರ ಸಮೀಪದ ಕೊಗ್ರೆಯ ಜಾಳ್ಮಾರದಲ್ಲಿ ನಡೆದಿದೆ. ರತ್ನಾಕರ (38) ಮೃತ ಆಟೋ ಚಾಲಕ.

ಇದನ್ನೂ ಓದಿ: 60 ಪರ್ಸೆಂಟೇಜ್ ತೆಗೆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ

ಕಳೆದ ಎರಡು ದಿನದಿಂದ ಜಯಪುರ, ಕೊಪ್ಪ, ಶೃಂಗೇರಿ ಭಾಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಒಂದರ ಹಿಂದೆ ಒಂದು ಅವಾಂತರ ಸೃಷ್ಟಿಯಾಗುತ್ತಿದೆ. ಇದೀಗ ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಆಸ್ತಿ ಖರೀದಿ, ಮಾರಾಟಗಾರರಿಗೆ ಭರ್ಜರಿ ಸುದ್ದಿ; ಏನದು? ಇಲ್ಲಿದೆ ನೋಡಿ
ಇನ್ನು ಘಟನಾ ಸ್ಥಳಕ್ಕೆ ಜಯಪುರ ಪೊಲೀಸ್ ಠಾಣಾ ಪಿಎಸ್ ಐ ಅಂಬರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ವಿವಿಧ ಯೋಜನೆಯಲ್ಲಿ ಶೇ.90ರಷ್ಟು ಸಹಾಯಧನ












