ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಜೋಡಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ವೆಟರ್ನರಿ ಆಸ್ಪತ್ರೆ ಬಳಿ ನಡೆದಿದೆ.
ಇದನ್ನೂ ಓದಿ: ಹುಟ್ಟೂರು ಶೃಂಗೇರಿಯನ್ನ ಕೊಂಡಾಡಿದ ವಜ್ರಕಾಯ ಬೆಡಗಿ; ನಾನು ಶೃಂಗೇರಿಯವಳು ಎನ್ನಲು ಈ ಕಾರಣಕ್ಕೆ ಹೆಮ್ಮೆ ನಭಾ ನಟೇಶ್..

ಚಾಲಕನ ನಿಯಂತ್ರಣ ತಪ್ಪಿದ ಕಾರು ನೇರವಾಗಿ ಜೋಡಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ವರ್ಷದ ಕೊನೆಯ ಖಗ್ರಾಸ ಚಂದ್ರಗ್ರಹಣ; ಶುರು-ಅಂತ್ಯ ಯಾವಾಗ?












