ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಲಾರಿ ಅಪಘಾತ ಸಂಭವಿಸಿ ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕೋಣಂದೂರು ಸಮೀಪದ ಹುಲ್ಲತ್ತಿ ರಸ್ತೆಯಲ್ಲಿ ಶನಿವಾರ ನಡೆದಿದೆ.
ಹರಿಹರ ಮೂಲದ ಸುಮಾರು 35 ಮಂದಿ ಪ್ರಯಾಣಿಕರನ್ನು ಹೊತ್ತ ಲಾರಿ ಹಣೆಗೆರೆ ಕಟ್ಟೆಯಿಂದ ಪಿರನ್ ಗುಡ್ಡ ಕಡೆಗೆ ತೆರಳುತ್ತಿದ್ದ ವೇಳೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ವಾಹನದಲ್ಲಿದ್ದವರು ಚದುರಿ ಬಿದ್ದು, ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಗಾಯಾಳುಗಳನ್ನು ತಕ್ಷಣ ಕೋಣಂದೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

















