ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮಳೆಯಿಂದಾಗಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಸುಮಾರು 10 ಅಡಿ ಆಳದ ಕಾಫಿತೋಟಕ್ಕೆ ಇಳಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಬ್ಬುಗೂಡಿಗೆ ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ: IBPS PO ನಲ್ಲಿ 5208 ಹುದ್ದೆಗಳ ನೇಮಕ; ಆಕರ್ಷಕ ಸಂಬಳ

ಅದೃಷ್ಟವಶಾತ್ ತೋಟಕ್ಕೆ ಹಾಕಿದ್ದ ವಿದ್ಯುತ್ ತಂತಿ ಬೇಲಿಗೆ ಕಾರು ತಗಾದ ರೀತಿಯಲ್ಲಿ ನಿಂತ ಹಿನ್ನಲೆಯಲ್ಲಿ ದೊಡ್ಡ ಅನಾಹುತವೊಂದು ತಪ್ಪಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಮರ ಕಡಿಯಲು ನಿಯಮ ಸರಳೀಕರಣ












