ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲನಾಡ್ ಕೆಫೆ ಸಮೀಪ ಮಂಗಳವಾರ ಸಂಭವಿಸಿದೆ.
ಮಂಗಳೂರಿನಿಂದ ಮೂಡಿಗೆರೆ ಕಡೆಗೆ ಸಂಚರಿಸುತ್ತಿದ್ದ ಐಟ್ವೆಂಟಿ ಕಾರು, ಮಲ್ಲನಾಡ್ ಕೆಫೆ ಬಳಿ ಏಕಾಏಕಿ ಚಾಲಕನ ಹತೋಟಿ ತಪ್ಪಿ ರಸ್ತೆ ಬದಿಯ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಅಪಘಾತದ ತೀವ್ರತೆಗೆ ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಣಕಲ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.












