ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 50 ಅಡಿ ಆಳದ ಕಂದಕಕ್ಕೆ ಬಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ: ಈ ಕುಟುಂಬಗಳಿಗೆ ಎಲ್ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ

ಮುತ್ತೋಡಿ ಅರಣ್ಯ ವಲಯದ ಹೊನ್ನಾಳ ಗ್ರಾಮದ ಸಮೀಪ ಈ ಅಪಘಾತ ಸಂಭವಿಸಿದೆ. ಸುಮಾರು 50 ಅಡಿ ಎತ್ತರದಿಂದ ಕಂದಕಕ್ಕೆ ಬಿದ್ದ ಕಾರು ನಾಲ್ಕೂ ಚಕ್ರಗಳು ಮೇಲ್ಭಾಗವಾಗುವಂತೆ ಉರುಳಿ ಬಿದ್ದಿದೆ. ಘಟನೆ ನಡೆದ ವೇಳೆ ಕಾರಿನಲ್ಲಿ ಎಷ್ಟು ಮಂದಿ ಪ್ರಯಾಣಿಸುತ್ತಿದ್ದರು ಹಾಗೂ ಅವರು ಎಲ್ಲಿಯವರು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಸ್ಥಳೀಯರು ಗಮನಿಸುವಷ್ಟರಲ್ಲಿ ಕಾರಿನ ಸಮೀಪ ಯಾರೂ ಇರಲಿಲ್ಲ ಎಂದು ತಿಳಿದುಬಂದಿದೆ. ಆದರೆ, ಕಾರಿನಲ್ಲಿ ಓರ್ವ ಪ್ರಯಾಣಿಕನಿದ್ದ ಮಾಹಿತಿ ಲಭ್ಯವಾಗಿದ್ದು, ಆತ ಆಸ್ಪತ್ರೆಗೆ ತೆರಳಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಘಟನೆ ಕುರಿತು ಮಲ್ಲಂದೂರು ಪೊಲೀಸ್ ಠಾಣೆಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ನೀಡಲಾಗಿಲ್ಲ. ಪೊಲೀಸರಿಗೆ ಮಾಹಿತಿ ನೀಡದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಈ ಘಟನೆ ಮತ್ತಷ್ಟು ಕುತೂಹಲ ಮೂಡಿಸಿದೆ. ಕಾರಿನಲ್ಲಿ ಬಂದವರು ಪ್ರಾಣಿ ಬೇಟೆಗೆ ಅರಣ್ಯ ಪ್ರದೇಶಕ್ಕೆ ಬಂದಿದ್ದರಾ ಎಂಬ ಅನುಮಾನವೂ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ: ಮಾ.18 ರಿಂದ SSLC ಪರೀಕ್ಷೆ ಆರಂಭ; ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ













