ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆ, ಮುಳ್ಳಯ್ಯನಗಿರಿ 4 ದಿನ ಬಂದ್

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ದತ್ತಪೀಠದಲ್ಲಿ ನಡೆಯಲಿರುವ ದತ್ತಜಯಂತಿ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ ಸೇರಿದಂತೆ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.


ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ಜಿಬಿಎ ಗುಡ್​ನ್ಯೂಸ್; ಮಧ್ಯವರ್ತಿಗಳ ಹಾವಳಿ ಸೇರಿ ಭ್ರಷ್ಟಾಚಾರಕ್ಕೂ ಬ್ರೇಕ್


ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಡಿಸೆಂಬರ್ 1 ರಿಂದ 4 ರವರೆಗೆ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಮತ್ತು ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ.

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಡಿಸೆಂಬರ್ 2, 3, ಮತ್ತು 4 ರಂದು ದತ್ತಜಯಂತಿ ಸಂಭ್ರಮ ನಡೆಯಲಿದೆ. ಡಿಸೆಂಬರ್ 5ರ ಬೆಳಗ್ಗೆ 10 ಗಂಟೆ ಬಳಿಕ ಮುಳ್ಳಯ್ಯನಗಿರಿ ಭಾಗ ಪ್ರವಾಸಿಗರಿಗೆ ಮುಕ್ತವಾಗಲಿದೆ.


ಇದನ್ನೂ ಓದಿ: PM ಕಿಸಾನ್ ಯೋಜನೆಯಿಂದ 35 ಲಕ್ಷ ರೈತರ ಹೆಸರು ಡಿಲೀಟ್


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.