

ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲಿನ ಇಡಿ ದಾಳಿಯನ್ನು ಶೃಂಗೇರಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ದುರ್ಗಾ ಚರಣ್ ತೀವ್ರವಾಗಿ ಖಂಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದೆ. ಇದರಿಂದ ಕಾಂಗ್ರೆಸ್ ಸರ್ಕಾರ ಜನಪ್ರಿಯವಾಗುತ್ತಿರುವುದು ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ ಎಂದು ದುರ್ಗಾ ಚರಣ್ ಆರೋಪಿಸಿದರು.

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸುವುದು, ಕಪ್ಪುಹಣವನ್ನು ವಾಪಸ್ ತರುವುದು ಹಾಗೂ ವಾರ್ಷಿಕ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದ ಬಿಜೆಪಿ, ಅಧಿಕಾರಕ್ಕೆ ಬಂದ ಬಳಿಕ ಜನರ ನಿರೀಕ್ಷೆಗೆ ತಕ್ಕಂತೆ ನಡೆದುಕೊಂಡಿಲ್ಲ. ಅಂಬಾನಿ ಆದಾನಿ ಅಮಿತ್ ಶಾ ನಿತಿನ್ ಗಡ್ಕರಿ ಇಂತವರ ಮಕ್ಕಳ ಖಜಾನೆ ತುಂಬುತ್ತಿದೆ ಹೊರತು ಬಡವರ ಬದುಕುಗಳು ಸರಿಯಾಗುತ್ತಿಲ್ಲ. ಕಾಂಗ್ರೆಸ್ ನಾಯಕರ ರಾಜಕೀಯ ಬೆಳವಣಿಗೆಯನ್ನು ಸಹಿಸಲಾಗದೆ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಇಡಿ, ಆದಾಯ ತೆರಿಗೆ ಇಲಾಖೆ ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ದಾಳಿ ನಡೆಸಿ ಕಾಂಗ್ರೆಸ್ ನಾಯಕರನ್ನು ಹೆದರಿಸುವ ಪ್ರಯತ್ನ ನಡೆಯುತ್ತಿದೆ ಎಂದು ದುರ್ಗಾ ಚರಣ್ ಆರೋಪಿಸಿದರು.
ಕೇಂದ್ರ ತನಿಖಾ ಸಂಸ್ಥೆಗಳ ದಾಳಿಗಳು ರಾಜಕೀಯ ಪ್ರೇರಿತವಾಗಿದ್ದರೆ, ಬಿಜೆಪಿಯ ನಾಯಕರ ಮೇಲೂ ಇದೇ ರೀತಿಯ ಕ್ರಮ ಏಕೆ ನಡೆಯುತ್ತಿಲ್ಲ?’ ಎಂದು ಪ್ರಶ್ನಿಸಿದ ಅವರು, ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.













