
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಾಲು ಜಾರಿ ಹೇಮಾವತಿ ನದಿಗೆ ಬಿದ್ದ ಪರಿಣಾಮ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಡಿದಾಳು ಗ್ರಾಮದಲ್ಲಿ ನಡೆದಿದೆ.
ಕಡಿದಾಳು ಗ್ರಾಮದ ನಿವಾಸಿ ಸುಬ್ಬಮ್ಮ (70) ಮೃತರು. ನಿನ್ನೆ ಬೆಳಿಗ್ಗೆ ಹೇಮಾವತಿ ನದಿ ತೀರದಲ್ಲಿ ನಡೆದು ಹೋಗುವ ವೇಳೆ ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಗಮನಿಸಿದ ನಂತರ ಘಟನೆ ಬೆಳಕಿಗೆ ಬಂದಿದ್ದು, ನದಿಯಲ್ಲಿ ಶವ ಪತ್ತೆಯಾಗಿದೆ.

ಈ ಕುರಿತು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ. (ವರದಿ- ತನು ಕೊಟ್ಟಿಗೆಹಾರ)















