MRP ₹170 ಇದ್ದರೂ ₹250ಕ್ಕೆ ಕಿಂಗ್ ಸಿಗರೇಟ್ ಮಾರಾಟ

ಕೊಟ್ಟಿಗೆಹಾರ: (ನ್ಯೂಸ್‌ ಮಲ್ನಾಡ್‌ ವರದಿ) ಐಟಿಸಿ ಕಂಪನಿಯ ಕಿಂಗ್ ಸಿಗರೇಟ್ ಪ್ಯಾಕ್ ಮೇಲೆ ಮುದ್ರಿತ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ₹170 ಆಗಿದ್ದರೂ, ಹಲವು ಚಿಲ್ಲರೆ ಅಂಗಡಿಗಳಲ್ಲಿ ಅದೇ ಪ್ಯಾಕ್ ಅನ್ನು ₹230ರಿಂದ ₹250ರವರೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ.

ನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ

ಒಂದು ಪ್ಯಾಕ್‌ ನಲ್ಲಿರುವ ಸಿಗರೇಟ್‌ ಗಳನ್ನು ಪ್ರತ್ಯೇಕವಾಗಿ ಮಾರಾಟ ಮಾಡುವ ಸಂದರ್ಭಗಳಲ್ಲಿ ಪ್ರತಿ ಕಿಂಗ್ ಸಿಗರೇಟ್‌ಗೆ ₹25ವರೆಗೆ ಹಣ ವಸೂಲಿ ಮಾಡಲಾಗುತ್ತಿದೆ. ಎಂಆರ್‌ಪಿ ಲೆಕ್ಕಾಚಾರ ಪ್ರಕಾರ ಪ್ರತಿ ಸಿಗರೇಟ್‌ಗೆ ಸುಮಾರು ₹17 ಮಾತ್ರ ಆಗಬೇಕಾದರೂ, ಅದಕ್ಕಿಂತ ಹೆಚ್ಚಿನ ದರ ವಸೂಲಿ ಮಾಡುತ್ತಿರುವುದು ಗ್ರಾಹಕ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಲೆ ಕುರಿತು ಪ್ರಶ್ನಿಸಿದಾಗ ಕೆಲ ಅಂಗಡಿದಾರರು ಸ್ಪಷ್ಟ ಉತ್ತರ ನೀಡದೆ, ತಮ್ಮದೇ ದರ ನಿಗದಿ ಮಾಡಿಕೊಂಡು ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪಗಳಿವೆ. ಇನ್ನೂ ಕೆಲ ವ್ಯಾಪಾರಿಗಳು, “ಸಿಗರೇಟ್ ಮಾರಾಟ ಪ್ರತಿನಿಧಿಗಳು ನಮಗೆ ಹೆಚ್ಚಿನ ದರಕ್ಕೆ ಸರಕು ನೀಡುತ್ತಾರೆ. ಅದಕ್ಕಾಗಿ ಹೆಚ್ಚಾಗಿ ಮಾರಾಟ ಮಾಡಬೇಕಾಗುತ್ತದೆ” ಎಂದು ಕಾರಣ ನೀಡುತ್ತಿರುವುದು ಗಮನಾರ್ಹವಾಗಿದೆ.

ನ್ನೂ ಓದಿ: ಆಧಾರ್‌ ಸೇವಾ ಕೇಂದ್ರದಲ್ಲಿ ಜಾಬ್‌, ಅರ್ಜಿ ಆಹ್ವಾನ

ಗ್ರಾಹಕ ಹಕ್ಕು ಕಾಯ್ದೆ ಪ್ರಕಾರ ಎಂಆರ್‌ಪಿಗಿಂತ ಹೆಚ್ಚಿನ ದರಕ್ಕೆ ವಸ್ತು ಮಾರಾಟ ಮಾಡುವುದು ಕಾನೂನುಬಾಹಿರವಾಗಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಗ್ರಾಹಕ ಸಂರಕ್ಷಣಾ ಅಧಿಕಾರಿಗಳು ಇಂತಹ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವ ಅವಕಾಶವಿದೆ.

ಅಕ್ರಮ ದರ ವಸೂಲಿನ ವಿರುದ್ಧ ತಕ್ಷಣ ತಪಾಸಣೆ ನಡೆಸಿ, ತಪ್ಪಿತಸ್ಥ ಅಂಗಡಿದಾರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಎಂಆರ್‌ಪಿ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಮೂಲಕ ಗ್ರಾಹಕರಿಗೆ ನ್ಯಾಯ ಒದಗಿಸಬೇಕೆಂಬುದು ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿದೆ. (ವರದಿ- ತನು ಕೊಟ್ಟಿಗೆಹಾರ)

ನ್ನೂ ಓದಿ: ಆಧಾರ್‌ ಅಪ್ಡೇಟ್‌’ಗೆ ಸುವರ್ಣವಕಾಶ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.