ಬೆಳೆ ವಿಮೆ ನೋಂದಣಿ ಅವಧಿ ಆಗಸ್ಟ್ 31ರವರೆಗೆ ವಿಸ್ತರಿಸಿ: ಸರ್ಕಾರಕ್ಕೆ ಸುಧಾಕರ್ ಎಸ್. ಶೆಟ್ಟಿ ಒತ್ತಾಯ

ಕೊಪ್ಪ, ಜು.30: (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ವಿಧಾನಸಭಾ ಕ್ಷೇತ್ರದ ರೈತರು ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳಲು ಎದುರಿಸುತ್ತಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಗಣಿಸಿ, ಬೆಳೆ ವಿಮೆ ನೋಂದಣಿ ಅವಧಿಯನ್ನು 2026ರ ಆಗಸ್ಟ್ 31ರವರೆಗೆ ವಿಸ್ತರಿಸುವಂತೆ ಜೆಡಿಎಸ್ ರಾಷ್ಟ್ರೀಯ ವಕ್ತಾರ ಹಾಗೂ ಶೃಂಗೇರಿ ಕ್ಷೇತ್ರದ ಮುಖಂಡ ಸುಧಾಕರ್ ಎಸ್. ಶೆಟ್ಟಿ ರಾಜ್ಯ ಸರ್ಕಾರ ಮತ್ತು ತೋಟಗಾರಿಕಾ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಚಿಕ್ಕಮಗಳೂರು ಜಿಲ್ಲಾ ಜಂಟಿ ತೋಟಗಾರಿಕಾ ನಿರ್ದೇಶಕರಿಗೆ ಮನವಿ ಸಲ್ಲಿಸಿರುವ ಅವರು, ಕ್ಷೇತ್ರದ ಅನೇಕ ರೈತರು FRUITS ID ಸಮಸ್ಯೆ, ಬೆಳೆಗಳ ಸರಿಯಾದ ನೋಂದಣಿ ಆಗದಿರುವುದು ಹಾಗೂ ವಿವಿಧ ತಾಂತ್ರಿಕ ತೊಂದರೆಗಳಿಂದಾಗಿ ತೋಟಗಾರಿಕಾ ಇಲಾಖೆ ಮತ್ತು ತಾಲೂಕು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಈ ಕಾರಣದಿಂದ ಸಾವಿರಾರು ರೈತರು ಬೆಳೆ ವಿಮೆ ಸೌಲಭ್ಯದಿಂದ ವಂಚಿತರಾಗುವ ಆತಂಕವಿದೆ ಎಂದು ಹೇಳಿದ್ದಾರೆ.

ರೈತರ ಹಿತದೃಷ್ಟಿಯಿಂದ ಬೆಳೆ ವಿಮೆ ನೋಂದಣಿಗೆ ಇನ್ನೂ 30 ದಿನಗಳ ಕಾಲಾವಕಾಶ ನೀಡಿ, ಆಗಸ್ಟ್ 31ರವರೆಗೆ ಅವಧಿ ವಿಸ್ತರಿಸಬೇಕು ಎಂದು ಆಗ್ರಹಿಸಿರುವ ಅವರು, ಯಾವುದೇ ಅರ್ಹ ರೈತರು ಬೆಳೆ ವಿಮೆ ಸೌಲಭ್ಯದಿಂದ ವಂಚಿತರಾಗದಂತೆ ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

FRUITS ID ಸೇರಿದಂತೆ ವಿವಿಧ ತಾಂತ್ರಿಕ ಸಮಸ್ಯೆಗಳಿಂದ ರೈತರು ಸಮಯಕ್ಕೆ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ರೈತರ ಹಿತದೃಷ್ಟಿಯಿಂದ ನೋಂದಣಿ ಅವಧಿಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಿ, ಯಾವುದೇ ಅರ್ಹ ರೈತರು ವಿಮೆ ಸೌಲಭ್ಯದಿಂದ ವಂಚಿತರಾಗದಂತೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. – ಸುಧಾಕರ್ ಎಸ್. ಶೆಟ್ಟಿ, ಜೆಡಿಎಸ್ ರಾಷ್ಟ್ರೀಯ ವಕ್ತಾರ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.