ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಮೇಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಣ್ಣುವಳ್ಳಿ ಗ್ರಾಮದ ಫಾರಂ ಹೌಸ್ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿರುವ ಆಗುಂಬೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ₹1 ಲಕ್ಷಕ್ಕೂ ಅಧಿಕ ಮೌಲ್ಯದ ಕಳವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಭದ್ರಾವತಿ ತಾಲೂಕಿನ ಹೊಸಮನೆ ನಿವಾಸಿಗಳಾದ ಬಾಲರಾಜ್ (34) ಹಾಗೂ ಹರ್ಷ (34) ಬಂಧಿತ ಆರೋಪಿಗಳಾಗಿದ್ದಾರೆ. ಇವರು ಅಣ್ಣುವಳ್ಳಿ ಗ್ರಾಮದ ಫಾರಂ ಹೌಸ್ನಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಆಗುಂಬೆ ಪೊಲೀಸ್ ಠಾಣೆಯ ಸಿಬ್ಬಂದಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದು, ಅವರಿಂದ ₹1 ಲಕ್ಷಕ್ಕೂ ಅಧಿಕ ಮೌಲ್ಯದ ಕಳವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















