ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಅಡಿಕೆ ಎಲೆಚುಕ್ಕೆ ರೋಗ, ಕೊಳೆ ರೋಗ ಹಾಗೂ ಸಾಲಕ್ಕೆ ಬೇಸತ್ತು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದಿದೆ. ಸುಣ್ಣದಮನೆಯ ನೇಮನಾಯ್ಕ (60) ಆತ್ಮಹತ್ಯೆ ಮಾಡಿಕೊಂಡ ರೈತ.
ಇದನ್ನೂ ಓದಿ; ‘ಮಾಫಿಯಾ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಶೃಂಗೇರಿಯ ಪ್ರತಿಭೆ; ವಿದ್ಯಾಧಿದೇವತೆ ನಾಡಲ್ಲಿ ಸಾಧಿಸಿದ ಅದ್ವಿತೀಯ ಪ್ರತಿಭೆ

ಅಡಿಕೆ ಎಲೆಚುಕ್ಕೆ ರೋಗ ಹಾಗೂ ಕೊಳೆ ರೋಗದಿಂದ ಬೇಸತ್ತು ಜೀವನ ನಿರ್ವಹಣೆಗೆ ಎರಡು ಲಕ್ಷ ಹಾಗೂ ಇತರೆ ಕೈ ಸಾಲ ಮಾಡಿಕೊಂಡಿದ್ದ ರೈತ ನೇಮನಾಯ್ಕ. ಸಾಲ ತೀರಿಸಲು ದಾರಿ ತೋಚದೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ; ಕಾಫಿ ಪ್ರಿಯರಿಗೆ ಬಿಗ್ ಶಾಕ್; ಪ್ರತಿ ಕೆಜಿ ಕಾಫಿ ಪುಡಿ ಬೆಲೆ 100 ರೂ ಏರಿಕೆ..!
ಆಗುಂಬೆಯಲ್ಲಿ ಕಾಡಾನೆ ಹಾವಳಿ;
ತೀರ್ಥಹಳ್ಳಿ ತಾಲೂಕಿನ ಆಗುಂಬೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೇಗರವಳ್ಳಿ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾಡಾನೆಗಳು ರೈತರ ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ ಘಟನೆ ನಡೆದಿದೆ. ಕಾರೇಕುಂಬ್ರಿ ರೈತ ಗಣೇಶ್ ಬಿ. ಕೆ ಎಂಬುವವರ ಭತ್ತದ ಗದ್ದೆಗೆ ಸತತ ಎರಡು ದಿನಗಳಿಂದ ಆನೆಗಳು ಬರುತ್ತಿದ್ದು, ಆನೆ ಕಾಟಕ್ಕೆ ಭತ್ತದ ಬೆಳೆ ಸಂಪೂರ್ಣ ನಾಶವಾಗಿದೆ. ನಾಟಿ ಮಾಡಿದ್ದ ಬೆಳೆ ಸಂಪೂರ್ಣ ನಾಶಗೊಂಡ ಪರಿಣಾಮ ರೈತ ಕಂಗಾಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?













