ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಎಲೆ ಚುಕ್ಕಿ ರೋಗಕ್ಕೆ ಹೆದರಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯತ್ ದಂಡಿನಕೊಡಿಗೆ ಗ್ರಾಮದಲ್ಲಿ ನಡೆದಿದೆ. ನಾರಾಯಣ ಪೂಜಾರಿ (68) ಆತ್ಮಹತ್ಯೆ ಮಾಡಿಕೊಂಡ ಸಣ್ಣ ರೈತ.
ಇದನ್ನೂ ಓದಿ; ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?

ಮಲೆನಾಡನ್ನು ಕಾಡುತ್ತಿರುವ ಎಲೆ ಚುಕ್ಕಿ ರೋಗದಿಂದ ಈಗಾಗಲೇ ಅನೇಕ ರೈತರು ಜೀವ ಕಳೆದುಕೊಂಡಿದ್ದಾರೆ. ಈ ನಡುವೆ ತೀರ್ಥಹಳ್ಳಿಯಲ್ಲಿ ಸಣ್ಣ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಂಗಳೂರಿನ ವೆಬ್ಲಾಕ್ ಆಸ್ಪತ್ರೆಯಲ್ಲಿ ನಿನ್ನೆ (ಗುರುವಾರ) ಮೃತಪಟ್ಟಿದ್ದಾರೆ.
ಸರ್ಕಾರಿ ಕಛೇರಿಯಿಂದಾದ ತಪ್ಪಿಗೆ ಜನರು ಹೊಣೆಗಾರರು ಏಕಾಗಬೇಕು?. ಸಮಸ್ಯೆ ಬಗೆಹರಿಸಲು ಒತ್ತಾಯ
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಜನನ ಪ್ರಮಾಣಪತ್ರ ನೀಡಿ ಆಧಾರ್ ಕಾರ್ಡ್ ಮಾಡಿಸಿದ್ದರೂ ಸಹ ಆಧಾರ್ ಕಾರ್ಡ್ ನಲ್ಲಿ ಹೆಸರನ್ನು ತಪ್ಪಾಗಿ ನಮೂದಿಸಿದ್ದಾರೆ, ಈಗ ಗಮನಕ್ಕೆ ತಂದರೆ ಸರಿಪಡಿಸಿಕೊಳ್ಳುತ್ತಿಲ್ಲ, ಇಲಾಖೆಯ ತಪ್ಪಿಗೆ ಜನರು ಸಮಸ್ಯೆ ಅನುಭವಿಸುವಂತಾಗಿದೆ ಎಂದು ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಸದಸ್ಯ ಶಬರೀಶ್ ಆರೋಪಿಸಿದ್ದಾರೆ.
ಕೆಲವು ವರ್ಷಗಳ ಹಿಂದೆ ಮಹಮ್ಮದ್ ಅಶ್ರಫ್ ಎಂಬುವವರ ಮಗ ಮಹಮ್ಮದ್ ಶಯಾನ್ ಎಂಬುವನ ಜನನ ಪ್ರಮಾಣಪತ್ರ ನೀಡಿ ಆಧಾರ್ ಕಾರ್ಡ್ ಮಾಡಿಸಲಾಗಿತ್ತು, ಆ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿ ಮಹಮ್ಮದ್ ಶಯಾನ್ ಬದಲಿಗೆ ಮೊಹಮ್ಮದ್ ಶಯಾನ್ ಎಂದು ನಮೂದಿಸಿದ್ದಾರೆ, ಆ ನಂತರ ಶಾಲೆಯಲ್ಲಿಯೂ ಅದೇ ತಪ್ಪಾದ ಹೆಸರಿನಿಂದ ದಾಖಲಾತಿ ಆಗಿದೆ.












