
ಎನ್.ಆರ್.ಪುರ : (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹೆನ್ನಂಗಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕೃಷ್ಣಮೂರ್ತಿ (45) ಎಂದು ಗುರುತಿಸಲಾಗಿದೆ. ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿರುವ ಹೆನ್ನಂಗಿ ಗ್ರಾಮದ ಕೃಷ್ಣಮೂರ್ತಿ ಅವರು ತೋಟದ ಕೆಲಸ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಏಕಾಏಕಿ ಎದುರಾದ ಕಾಡಾನೆ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
















