ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿಯಾಗಿ ತಾಯಿ ಮತ್ತು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಿಂದ ಸಾಗರಕ್ಕೆ ತೆರಳುವ ಕೋಣೆ ಹೊಸೂರು-ತುಪೂರು ಬಳಿ ನಡೆದಿದೆ. ಅಸ್ಮಾಭಾನು (30) ಮತ್ತು ಮೊಹ್ಮದ್ ಖಬೀರ್ (3) ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ಯೋಜನೆ; ಪ್ರತಿ ತಿಂಗಳು ಸಿಗಲಿದೆ 5,000 ರೂ. ಪಿಂಚಣಿ

ತರೀಕೆರೆಯ ಬುಕ್ಕಂಬೂದಿಯಿಂದ ಸಾಗರಕ್ಕೆ ನಾಲ್ವರು ದ್ವಿಚಕ್ರ ವಾಹನದಲ್ಲಿ ತೆರಳುವಾಗ ಹಿಂಬದಿಯಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ತಾಯಿ ಅಸ್ಮಾ ಭಾನು, ತಂದೆ ಖಲಂದರ್ ಮತ್ತೋರ್ವ 6 ವರ್ಷದ ಸಹೋದರ ಗಂಭೀರ ಗಾಯವಾಗಿದ್ದು ತಕ್ಷಣ ಆನಂದಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಅಸ್ಮಭಾನು ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: BPL ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
6 ವರ್ಷದ ಗಂಡು ಮಗು ಮತ್ತು ಖಲಂದರ್ ಅವರನ್ನ ಮೆಗ್ರಾನ್ ಗೆ ಕರೆತರಲಾಗಿದೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: £19,800 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ













