
ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆಯಲ್ಲಿ ನಡೆದಿದೆ.
ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ

ಇಂದು ಮಧ್ಯಾಹ್ನ ಮೂರು ಗಂಟೆಯ ಹೊತ್ತಿಗೆ ಬೈಕ್ ವೊಂದು ಉಡುಪಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಟೆನ್ ವೀಲ್ಹ್ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬೈಕ್ ಲಾರಿಯಡಿಗೆ ಹೋಗಿದೆ. ಬೈಕ್ ಸವಾರ ಕೂಡ ಚಕ್ರದಡಿಯಲ್ಲಿ ಸಿಲುಕಿದ್ದು, ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಇನ್ನೊರ್ವ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಜೆಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ: ಜಮೀನು ಸರ್ವೆಯಲ್ಲಿ ಬದಲಾವಣೆ;ಇನ್ಮುಂದೆ 10 ನಿಮಿಷದಲ್ಲಿ ಮುಗಿಯಲಿದೆ ಲ್ಯಾಂಡ್ ಸರ್ವೆ; ಈ ಕುರಿತು ಕಂದಾಯ ಸಚಿವ ಹೇಳಿದ್ದೇನು?
ಮಾಳೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇಂಧನ ಸಚಿವ ಕೊಟ್ರು ಸಿಹಿಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ













