
ಹರಿಹರಪುರ: (ನ್ಯೂಸ್ ಮಲ್ನಾಡ್ ವರದಿ) ಶ್ರೀ ಶಾರದಾ ಲಕ್ಷ್ಮೀ ನರಸಿಂಹ ಪೀಠದ ಶ್ರೀಗಳ ಪೂರ್ವಾಶ್ರಮದ ತಂದೆಯವರು ವಿಧಿವಶರಾಗಿದ್ದಾರೆ.
ಇದನ್ನೂ ಓದಿ: ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ಹರಿಹರಪುರದ ಶ್ರೀ ಶಾರದಾ ಲಕ್ಷ್ಮೀ ನರಸಿಂಹ ಪೀಠದ ಪರಮಪೂಜ್ಯ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮಿಗಳವರ ಪೂರ್ವಾಶ್ರಮದ ತಂದೆಯವರಾದ ಹಾಗೂ ಉಳುವೆ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದ ಪ್ರಧಾನ ಅರ್ಚಕರಾಗಿ 30 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಶ್ರೀ ಗೋಪಾಲಯ್ಯನವರು ವಿಧಿವಶರಾಗಿದ್ದಾರೆ.














