ಮೂಡಿಗೆರೆ: ಮಳೆಗೆ ರಸ್ತೆ ಕೊಚ್ಚಿ ಹೋಗುವ ಆತಂಕ: ಅಧಿಕಾರಿಗಳ ಭೇಟಿ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ತಾಲ್ಲೂಕಿನಾದ್ಯಂತ ಗಾಳಿ ಮಳೆ ಬೀಸುತ್ತಿದ್ದು, ಜನಜೀವನ ಅಸ್ತವ್ಯಸ್ತ ವಾಗಿದೆ.


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್‌ ಆದವರಿಗೆ 50,000ರೂ ವರೆಗೆ ಸ್ಕಾಲರ್‌ ಶಿಪ್; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


ತಾಲ್ಲೂಕಿನ ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಡಲದಿಣ್ಣೆ ಗ್ರಾಮದ ರಸ್ತೆ ಮಳೆಗೆ ಕೊಚ್ಚಿ ಹೋಗುವ ಆತಂಕ ಎದುರಾಗಿದೆ. ಈ ಭಾಗದಲ್ಲಿ ಕೂಲಿ ಕಾರ್ಮಿಕರೇ ಹೆಚ್ಚಾಗಿದ್ದು, ಶಾಲಾ ಮಕ್ಕಳು ಕೂಡ ಈ ರಸ್ತೆಯಲ್ಲಿ ನಡೆದುಕೊಂಡು ಹೋಗಬೇಕಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಪೈಪುಗಳು ಮಣ್ಣು ಸಮೇತ ಕೊಚ್ಚಿ ಹೋಗುತ್ತದೆ. ಜನರು ದಿನ ಸಾಮಗ್ರಿ ಹಾಗೂ ಕೆಲಸಕ್ಕೆ ಸಾಗಲು ತೊಂದರೆ ಪಡುವಂತಾಗಿದೆ.


ಇದನ್ನೂ ಓದಿ: 60 ಪರ್ಸೆಂಟೇಜ್ ತೆಗೆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್‌ ಶಿಪ್; ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶೀಲಾ ಗೋಪಾಲ್, ಉಪಾಧ್ಯಕ್ಷೆ ಸ್ವರೂಪ, ಸದಸ್ಯರಾದ ಸ್ಮಿತಾ, ಎ.ಎನ್.ರಘು ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಬಳಿಕ ಮಾತನಾಡಿದ ಅಧ್ಯಕ್ಷೆ ಸುಶೀಲ, ಇದು ಗ್ರಾಮ ಪಂಚಾಯಿತಿ ಅನುದಾನದಿಂದ ರಸ್ತೆ ಕಾಮಗಾರಿ ಮಾಡಲು ಸಾಧ್ಯವಿಲ್ಲ. ಇದಕ್ಕೆ ಹೆಚ್ಚಿನ ಅನುದಾನ ಬೇಕಿದೆ. ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಹಾಗೂ ಶಾಸಕರ ಅನುದಾನದಿಂದ ಈ ರಸ್ತೆ ಕಾಮಗಾರಿ ಮಾಡಬಹುದು. ಈ ಬಗ್ಗೆ ಶಾಸಕರಿಗೆ ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದೆ ಎಂದರು. (ವರದಿ- ತನು ಕೊಟ್ಟಿಗೆಹಾರ)


ಇದನ್ನೂ ಓದಿ: ರಾಜ್ಯದಲ್ಲಿ ಆಸ್ತಿ ನೋಂದಣಿಗೆ ಇ-ಸಹಿ ಕಡ್ಡಾಯ; ಹೊಸ ನಿಯಮ ಜಾರಿ!


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.