
ಕಡೂರು: (ನ್ಯೂಸ್ ಮಲ್ನಾಡ್ ವರದಿ) ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ. ಗಾನವಿ (15) ಮೃತ ವಿದ್ಯಾರ್ಥಿನಿ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಈಕೆ ಕಡೂರು ತಾಲೂಕಿನ ಯಳ್ಳಂಬಳಸೆ ಗ್ರಾಮದ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿದ್ದಳು. ಕೆಲ ದಿನಗಳ ಹಿಂದೆ ನಡೆದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಗಾನವಿಗೆ ಕಡಿಮೆ ಅಂಕ ಬಂದಿದೆ. ಇದರಿಂದ ಸದಾ ಆತಂಕದಲ್ಲೇ ಇದ್ದ ಗಾನವಿ, ಪ್ರಿಪರೇಟರಿಯಲ್ಲಿ ಕಡಿಮೆ ಅಂಕ ಬಂದಿದೆ, ಇನ್ನು ಮುಖ್ಯ ಪರೀಕ್ಷೆಯಲ್ಲಿ ಫೇಲ್ ಆಗ್ತೀನಿ ಎಂಬ ಭೀತಿಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.

ಮೊದಲ ಪ್ರಿಪರೇಟರಿ ಪರೀಕ್ಷೆಯಲ್ಲಿ ಗಾನವಿ 500ಕ್ಕೆ 93 ಅಂಕ ಪಡೆದಿದ್ದಳು. ಜನವರಿ 20 ರಂದು ರಾತ್ರಿ 9.30ರ ಸುಮಾರಿಗೆ ವಿದ್ಯಾರ್ಥಿನಿ ಗಾನವಿ ಮನೆಗೆ ಕಡೂರು ಬಿಇಓ ತಿಮ್ಮಪ್ಪ ಭೇಟಿ ನೀಡಿದ್ದರು. ಈ ವೇಳೆ ಹೆಚ್ಚಾಗಿ ಅಭ್ಯಾಸ ಮಾಡುವಂತೆ ಸಲಹೆ ಹೇಳಿದ್ದರಂತೆ. SSLC ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಲ್ಲೇ ಇರುತ್ತಿದ್ದ ಗಾನವಿ, ಎರಡು ದಿನಗಳ ಹಿಂದೆ ಮನೆಯಲ್ಲಿ ಅವರೆ ಕಾಳು ಬೆಳೆಗೆ ಹಾಕುವ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಗಾನವಿಯನ್ನ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಿಸದೇ ಗಾನವಿ ಸಾವನ್ನಪ್ಪಿದ್ದಾಳೆ.
ಈ ಘಟನೆ ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.














