ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ. ದಿಶಾ (22) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ.
ಇದನ್ನೂ ಓದಿ: ಏರ್ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ದಿಶಾ ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಪಟ್ಟಣದ ಬಿಸಿಎಂ ಹಾಸ್ಟೆಲ್ನಲ್ಲಿ ವಾಸವಾಗಿದ್ದರು. ನಿನ್ನೆ ಹಾಸ್ಟೆಲ್ನಲ್ಲಿದ್ದ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಸಹಪಾಠಿಗಳು ನೆರವಿಗೆ ಧಾವಿಸಿದರೂ, ಅದಾಗಲೇ ದಿಶಾ ಅವರು ಕೊನೆಯುಸಿರೆಳೆದಿದ್ದಾಳೆ.
ದಿಶಾಳಿಗೆ ಈ ಮುಂಚೆ ಹೃದಯ ಸಂಬಂಧಿ ಕಾಯಿಲೆ (Congenita Heart Disease) ಇದ್ದು, ಈ ಸಂಬಂಧ ಆಪರೇಷನ್ ಕೂಡ ಆಗಿದೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ












