ಖಾಸಗಿ ವಾಹಿನಿಯೊಂದರ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗಿರೀಶ್ ಮಟ್ಟಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ

ಧರ್ಮಸ್ಥಳದಲ್ಲಿ ನಿನ್ನೆ ಕುಡ್ಲ ರಾಂಪೇಜ್ ಎಂಬ ಹೆಸರಿನ ಯೂಟ್ಯೂಬರ್ ಆಗಿರುವ ಅಜಯ್ ಅಂಚನ್, ಯುನೈಟೆಡ್ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲ ರಾಂಪೇಜ್ ನ ಕ್ಯಾಮೆರಾ ಪರ್ಸನ್ ಮೇಲೆ ಹಲ್ಲೆ ಮಾಡಲಾಗಿದೆ. ಕ್ಯಾಮೆರಾವನ್ನು ಪುಡಿ ಮಾಡಿದ್ದಾರೆ.
ಈ ಘಟನೆಯ ಬಗ್ಗೆ ಸಾಮಾಜಿಕ ಹೋರಾಟಗಾರ ಗಿರೀಶ್ ಮಟ್ಟಣನವರ್ ಅವರ ಬಳಿ ಬೈಟ್ ಕೇಳಲು ಹೋದಾಗ ಬೈಯಲು ಆರಂಭಿಸಿದ್ದಾರೆ. ಈ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಗ್ಯಾಂಗ್ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂದೂ ಆರೋಪಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಸಮೀರ್ ಬೆದರಿಕೆ ಹಾಕಿದ್ದಾರೆ.
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ
ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ಪೊಲೀಸರು ರಕ್ಷಿಸಿ ಒಳಗೆ ಕೂರಿಸಿದ್ದರು. ಆಗ ಸ್ಥಳಕ್ಕೆ ಬಂದ ಜಯಂತ್ ಟಿ ನನ್ನ ವಿಡಿಯೋ ಮಾಡಿ ಹಲ್ಲೆ ಮಾಡಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬಿಎನ್ಎಸ್ ಸೆಕ್ಷನ್ 115(2), 189(2), 191(2), 351(2), 352, 190 ಅಡಿ ಎಫ್ಐಆರ್ ದಾಖಲಾಗಿದೆ.












