ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಎಂಎಲ್ಸಿ ಸಿ. ಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ 100ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ

ಸಿಟಿ ರವಿ ಬಂಧನ ವಿರೋಧಿಸಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ದಿಢೀರ್ ಪ್ರತಿಭಟನೆ ನಡೆಸಿದ್ದರು. ಇದರಿಂದ ಸಾರ್ವಜನಿಕರಿಗೆ ತೊಂದರೆ ಮತ್ತು ಸಾರ್ವಜನಿಕ ಶಾಂತಿ ಭಂಗವಾಗಿದೆ ಎಂದು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ; ಇ-ಖಾತಾ ಕುರಿತು ಬಿಗ್ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
ವಿವಿಧ ಆರೋಪದಡಿಯಲ್ಲಿ ಎಫ್ಐಆರ್:
ಅನುಮತಿ ಇಲ್ಲದೆ ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಿದ್ದು, ಬೈಕ್, ಟೈರ್ ಸುಟ್ಟಿದ್ದು, ಹೆದ್ದಾರಿ ತಡೆ, ಸಾರ್ವಜನಿಕರ ಶಾಂತಿಗೆ ಭಂಗ ಮತ್ತು ಪ್ರತಿಭಟನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದಡಿ 100ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ; HSRP ಅಳವಡಿಸದ ವಾಹನ ಮಾಲೀಕರಿಗೆ ಬಿಗ್ ರಿಲೀಫ್; ಹೈಕೋರ್ಟ್ ನಿಂದ ಮಹತ್ವದ ಸೂಚನೆ; ಏನಿದೆ ಗೊತ್ತಾ? ಇಲ್ಲಿದೆ ನೋಡಿ
ಸಿ.ಟಿ ರವಿಗೆ ಬಿಡುಗಡೆಗೆ ಹೈಕೋರ್ಟ್ ಆದೇಶ:
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ರವಿ ಹೈಕೋರ್ಟ್ ನಲ್ಲಿ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾಯಮೂರ್ತಿ ಎಂ. ಜಿ ಉಮಾ ಅವರು, ತನಿಖೆಗೆ ಸಹಕರಿಸಬೇಕು ಎಂದು ಷರತ್ತು ಬದ್ಧ ರಿಲೀಫ್ ನೀಡಿದೆ.















