ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಎರಡು ಕಾಡು ಗಿಳಿಗಳನ್ನು ಅಕ್ರಮವಾಗಿ ಬಂಧನದಲ್ಲಿ ಇಟ್ಟುಕೊಂಡಿದ್ದ ವ್ಯಕ್ತಿಯ ವಿರುದ್ಧ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಪ್ರಕರಣ ದಾಖಲಿಸಿದೆ.
ನಗರದ ಟಿಪ್ಪುನಗರದ ಚಾಮುಂಡಿ ಕಾಫಿ ಕ್ಯೂರಿಂಗ್ ಹಿಂಭಾಗದ ರಾಜಸ್ತಾನ ಕುಲ್ಪಿ ರಸ್ತೆ ನಿವಾಸಿ ಸುರೇಶ್ ಎಂಬುವರು ಕಾಡು ಗಿಳಿಗಳನ್ನು ಪಂಜರದಲ್ಲಿ ಸಾಕುತ್ತಿರುವ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ಸಿಐಡಿ ಅರಣ್ಯ ಸಂಚಾರಿ ದಳ ಅಧಿಕಾರಿಗಳು ದಾಳಿ ನಡೆಸಿದರು.

ದಾಳಿಯ ವೇಳೆ ಎರಡು ಕಾಡು ಗಿಳಿಗಳನ್ನು ಪಂಜರ ಸಮೇತ ವಶಪಡಿಸಿಕೊಳ್ಳಲಾಗಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸುರೇಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್ ನೆಜ್ಜುರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














