ಜಾವಗಲ್: (ನ್ಯೂಸ್ ಮಲ್ನಾಡ್ ವರದಿ) ಗ್ರಾಮದ ಬಸ್ ನಿಲ್ದಾಣದ ಸಮೀಪದ ಗ್ರಂಥಿಗೆ (ಪೂಜಾ ಸಾಮಗ್ರಿ) ಅಂಗಡಿಯಲ್ಲಿ ಸೋಮವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿ, ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿವೆ.
ಅಂಗಡಿ ಮಾಲೀಕ ಮನೋಜ್ ಅವರು ದೇವರ ಫೋಟೊಗೆ ಅಗರಬತ್ತಿ ಹಾಗೂ ದೀಪ ಹಚ್ಚಿ ಅಂಗಡಿಗೆ ಬೀಗ ಹಾಕಿ ತೆರಳಿದ್ದ ವೇಳೆ ಅಗರಬತ್ತಿಯ ಕಿಡಿ ಪೇಪರ್ ಹಾಗೂ ಪ್ಲಾಸ್ಟಿಕ್ ವಸ್ತುಗಳಿಗೆ ತಗುಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಅಂಗಡಿಯೊಳಗಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಬಾಗಿಲು ತೆರೆದು ಬೆಂಕಿ ನಂದಿಸಿದ್ದು, ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ ಪೂಜಾ ಸಾಮಗ್ರಿಗಳು, ಪ್ಲಾಸ್ಟಿಕ್ ವಸ್ತುಗಳು ಹಾಗೂ ಪೇಪರ್ ಲೋಟ-ತಟ್ಟೆಗಳು ಸುಟ್ಟು ಸುಮಾರು ₹2 ಲಕ್ಷ ನಷ್ಟ ಸಂಭವಿಸಿದೆ ಎಂದು ಅಂಗಡಿ ಮಾಲೀಕ ತಿಳಿಸಿದ್ದಾರೆ.
ಗ್ರಂಥಿಗೆ ಅಂಗಡಿಯಲ್ಲಿ ಅಗ್ನಿ ಅವಘಡ
















