ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಸಾಗರ ರಸ್ತೆಯ ಮಳಲಗದ್ದೆ-ಅವಲಗೋಡು ಮಾರ್ಗ ಮಧ್ಯೆ ನಡೆದಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್; ಏನದು, ಮಿಸ್ ಮಾಡ್ದೆ ಈ ಸುದ್ದಿ ಓದಿ

ಪಟ್ಟಣದ ದೊಡ್ಡಪೇಟೆಯ ಸಚಿನ್ ಎಂಬುವರಿಗೆ ಸೇರಿದ ಪೋರ್ಡ್ ಕಾರಿನಲ್ಲಿ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಕೊಂಡಿದ್ದು, ಕ್ಷಣಾರ್ಧದಲ್ಲಿ ಕಾರು ಸುಟ್ಟು ಕರಕಲಾಗಿದೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ಆದರೆ ಅಷ್ಟರಲ್ಲಿ ಕಾರು ಸಂಪೂರ್ಣ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮೊಬೈಲ್ ನಲ್ಲೇ ಸಿಗಲಿದೆ ಹಳೆಯ ಪಹಣಿ














