
ಕಡೂರು: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದ ದೊಡ್ಡಪೇಟೆ ವಾಸವಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿಕಾಣಿಸಿಕೊಂಡಿದ್ದು, ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಲಾಯಿತು.
ಇದನ್ನೂ ಓದಿ: ವಾಹನ ಮಾಲೀಕರ ಗಮನಕ್ಕೆ; ಇನ್ಮುಂದೆ ಗಾಡಿ FC ಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್

ಕಚೇರಿಯಲ್ಲಿ ಶುಕ್ರವಾರ ಮಧ್ಯಾಹ್ನ ಊಟಕ್ಕೆಂದು ಸಿಬ್ಬಂದಿ ಬಾಗಿಲು ಹಾಕಿಕೊಂಡು ಹೊರಟ ಬಳಿಕ ಕಂಪ್ಯೂಟರ್ ವೈರ್ ಗಳ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿಕಾಣಿಸಿಕೊಂಡಿದೆ. ಇಡೀ ಕಚೇರಿ ದಟ್ಟಹೊಗೆಯಿಂದ ಕೂಡಿದ ಪರಿಣಾಮ ಸ್ಥಳೀಯರು ಕಚೇರಿಯ ಕಿಟಕಿ, ಬಾಗಿಲುಗಳನ್ನು ಮುರಿದು ಅಕ್ಕಪಕ್ಕದ ನಿವಾಸಿಗರ ಮನೆಗಳ ನೀರಿನಿಂದ ಬೆಂಕಿ ಆರಿಸಿದರು.

ಕಚೇರಿಯಲ್ಲಿದ್ದ ಪೀಠೋಪಕರಣ ಸಾಮಗ್ರಿಗಳು, ಕಡತಗಳು ಸುಟ್ಟು ಕರಕಲಾಗಿವೆ.
ಇದನ್ನೂ ಓದಿ: ನಿಮ್ಮ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದೀರಾ?; ಅಂತಹವರು ಈ ಸ್ಟೋರಿ ಓದಲೇಬೇಕು?














